ಕಲಬುರಗಿ: ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರಕ್ಕೆ ಬರುವ ಮುನ್ನಾ ರೈತರ ಸಾಲಮನ್ನಾ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಜೊತೆಗೆ ಸಾಲಮನ್ನಾವನ್ನು ಮಾಡಿದ್ದಾರೆ. ಇದೀಗ ಈ ಬಾರಿಯೂ ಮತ್ತೆ ಸಾಲಮನ್ನಾ ಮಾಡುವ ಭರವಸೆಯನ್ನು ನೀಡಿದ್ದಾರೆ. ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇವೆ ಎಂದಿದ್ದಾರೆ.
ಕಲಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದ ಖಜೂರಿಯಲ್ಲಿ ಪಂಚರತ್ನ ರಥಯಾತ್ರೆಯನ್ನು ಮಹಾಜನತೆ ಅದ್ದೂರಿಯಾಗಿ ಬರಮಾಡಿಕೊಂಡರು. ಈ ಭಾಗದ ಮಣ್ಣಿನ ಮಕ್ಕಳು ತೊಗರಿ ಹಾರ ಹಾಕುವ ಮೂಲಕ ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದರು.
ಕ್ಷೇತ್ರದ @JanataDal_S ಅಭ್ಯರ್ಥಿ ಶ್ರೀಮತಿ ಮಹೇಶ್ವರಿ ವಾಲಿ ಸೇರಿದಂತೆ ಅನೇಕರು ಹಾಜರಿದ್ದರು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ಪಂಚರತ್ನ ಯಾತ್ರೆಗೆ ಚಾಲನೆ ನೀಡಿದ ಕುಮಾರಸ್ವಾಮಿ ಅವರು, ಕೆಲವರ ಕಪಿಮುಷ್ಠಿಯಲ್ಲಿ ಖಜೂರಿ ರಾಜಕಾರಣವಿದೆ. ಆದ್ದರಿಂದ ಖಜೂರಿ ಗ್ರಾಮವನ್ನು ಮುಕ್ತಗೊಳಿಸಬೇಕಿದೆ. ಆಳಂದ ತಾಲೂಕು ಸೇರಿದಂತೆ ರಾಜ್ಯದ ಹಲವೆಡೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.