Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ ಚುನಾವಣೆಗೆ ವಿಶೇಷ ಬೇಡಿಕೆಯಿಟ್ಟ ಮಾಜಿ ಸಚಿವೆ ಉಮಾಶ್ರೀ..!

---Advertisement---

ಬೆಂಗಳೂರು: 2023ರ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಇದರ ನಡುವೆ ಕಾಂಗ್ರೆಸ್ ಪಕ್ಷವೂ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಹಾಗೇ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳು ಜಾಸ್ತಿಯಾಗಿದ್ದಾರೆ, ಪಕ್ಷವೂ ಯಾರಿಗೆಲ್ಲಾ ಟಿಕೆಟ್ ಕೊಡಬೇಕು ಎಂಬ ಆಲೋಚನೆಯನ್ನು ಮಾಡಿದೆ. ಇದರ ನಡುವೆ ನಟಿ, ಮಾಜಿ ಸಚಿವೆ ಉಮಾಶ್ರೀ, ಹೈಕಮಾಂಡ್ ಬಳಿ ವಿಶೇಷ ಬೇಡಿಕೆಯೊಂದನ್ನು ಇಟ್ಟಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರಲ್ಲಿ ಮನವಿ ಮಾಡಿರುವ ಉಮಾಶ್ರೀ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಅತಿ ಹೆಚ್ಚು ಟಿಕೆಟ್ ನೀಡಬೇಕು ಎಂದು ಮನವಿ ಮಾಡುವ ಮೂಲಕ ಕಾಂಗ್ರೆಸ್ ನ ‘ನಾ ನಾಯಕಿ’ ಎಂಬ ಕಾರ್ಯಕ್ರಮದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ನಾ ನಾಯಕಿ ಕಾರ್ಯಕ್ರಮವನ್ನು ಪ್ರಿಯಾಂಕ ಗಾಂಧಿ ಉದ್ಘಾಟನೆ ಮಾಡಲಿದ್ದಾರೆ.

ಜನವರಿ 16ರಂದು ನಾ ನಾಯಕಿ ಕಾರ್ಯಕ್ರಮ, ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮಹಿಳಾ ಶಾಸಕರು, ಹಾಲಿ ನಾಯಕಿಯರು ಸೇರಿದಂತೆ ಕಾಂಗ್ರೆಸ್ ಮಹಿಳಾ ನಾಯಕಿಯರು ಸೇರಲಿದ್ದಾರೆ. ಈ ವೇಳೆ ಘಟಕದ ಹಲವು ಬೇಡಿಕೆಗಳ‌ನ್ನು ಮುಂದಿಡಲಿದ್ದೇವೆ ಎಂದು ತಿಳಿಸಿದ್ದಾರೆ. ಈ ಬಾರಿ 109 ಮಹಿಳಾ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಪ್ರಿಯಾಂಕ ಗಾಂಧಿ ಅವರ ಬಳಿ ಮನವಿ ಮಾಡಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...