Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ಥಿಕ ಸ್ವಾವಲಂಬನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೂರಕ; ಶಾಸಕ ಎಂ.ಚಂದ್ರಪ್ಪ

Facebook
Twitter
Telegram
WhatsApp

 

ಸುದ್ದಿಒನ್, ಹೊಳಲ್ಕೆರೆ, (ಅ.04) : ಕೆಳಸ್ಥರದ ಜನರ ಹಾಗೂ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪೂರಕವಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ಶಾಸಕರಾದ ಎಂ.ಚಂದ್ರಪ್ಪ ಅವರು ಹೇಳಿದರು.

ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ  ಹಾಗೂ ಜನಜಾಗೃತಿ ವೇದಿಕೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಸ್ಮೃತಿ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಸಂಸ್ಥೆಯು ಸಮಾಜದಲ್ಲಿರುವ ಕೆಳಸ್ಥರದ ಹಾಗೂ ಮಹಿಳೆಯರ ಆರ್ಥಿಕ ಪ್ರಗತಿಯ ಜೊತೆಗೆ ಸ್ವ ಉದ್ಯೋಗ ಹೊಂದಲು ರುಡ್‌ಸೆಟ್ ಮೂಲಕ ತರಬೇತಿಗಳನ್ನು ಹಮ್ಮಿಕೊಂಡು ನಿರುದ್ಯೋಗ ಯುವಕರಿಗೆ ದಾರಿ ದೀಪವಾಗುತ್ತಿದೆ. ದುಶ್ಚಟಗಳಿಗೆ ಸಂಸಾರವನ್ನು ಆಳು ಮಾಡಿಕೊಂಡು, ಜೀವನದ ಮೌಲ್ಯವನ್ನು ಕಳೆದುಕೊಂಡವರನ್ನು ಗುರುತಿಸಿ ಅಂತವರಿಗೆ 8 ದಿನಗಳ ಕಾಲ ಶಿಬಿರ ಮಾಡಿ, ಅವರಿಗೆ ನವ ಜೀವನ ಕಟ್ಟಿಕೊಳ್ಳಲು ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಸಮಾಜೋಮುಖಿ ಕಾರ್ಯಗಳನ್ನು ಧರ್ಮಸ್ಥಳ ಸಂಸ್ಥೆಯು ಮಾಡುತ್ತಿದ್ದು, ಅನ್ನದಾನ, ವಿದ್ಯದಾನಗಳ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದರು.

ಧರ್ಮಸ್ಥಳ ಸಂಸ್ಥೆಯ ಕಚೇರಿಯು ಬಾಡಿಗೆ ಕಟ್ಟಡದಲ್ಲಿದ್ದು, ಸ್ವಂತ ಕಟ್ಟಡಹೊಂದಲು ಜಾಗದ ವ್ಯವಸ್ಥೆ ಹೊಳಲ್ಕೆರೆಯಲ್ಲಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಹೊಳಲ್ಕೆರೆ ತಾಲ್ಲೂಕಿನ ಎಲ್ಲ ಕೆರೆಗಳಿಗೆ ಶೀಘ್ರದಲ್ಲಿ ನೀರು ತುಂಬಿಸುವ ಕಾರ್ಯ ಮಾಡಲಾಗುವುದು ಎಂದು ಶಾಸಕರಾದ ಚಂದ್ರಪ್ಪ ಹೇಳಿದರು.

ಮಾಜಿ ಶಾಸಕ ಪಿ.ರಮೇಶ್ ಮಾತನಾಡಿ , ಆರ್ಥಿಕ ವ್ಯವಹಾರವು ಕೇವಲ ಪುರುಷರ ಉಪಸ್ಥಿತಿಯಲ್ಲಿ ನಡೆಯುವಂತಹದ್ದನ್ನು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಿ ಗಂಡಿನಷ್ಟೆ ಜೀವನ ಸಾಗಿಸಲು ಬೇಕಾದ ವ್ಯವಹಾರ ಜ್ಞಾನವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ. ಸ್ವಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಸಂಸ್ಥೆಯು ಪೂರಕವಾಗಿದೆ. ಕುಡಿತದ ಚಟಕ್ಕೆ ಬಲಿಯಾದವರನ್ನು ಗುರುತಿಸಿ  ಅವರಿಗೆ ಪುನರ್ಜನ್ಮ ನೀಡುತ್ತಿರುವುದು ಯಾವ ಸಂಘ ಸಂಸ್ಥೆಗಳು ಮಾಡದ ಕಾರ್ಯವನ್ನು ಧರ್ಮಸ್ಥಳ ಸಂಸ್ಥೆಯು ಮಾಡುತ್ತಿದೆ ಎಂದು ಅಭಿವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕು ಮುನ್ನ ಶಿವಪುರ ಗ್ರಾಮದಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಜಾಥಕ್ಕೆ ಮಾಜಿ ಶಾಸಕ ರಮೇಶ್ ಚಾಲನೆ ನೀಡಿದರು. ಪ್ರಮುಖ ಬೀದಿಗಳಲ್ಲಿ ದುಶ್ಚಟಗಳ ವಿರುದ್ಧ ಘೋಷವಾಕ್ಯಗಳನ್ನು ಕೂಗುವ ಮೂಲಕ ಜಾಗೃತಿ ಮೂಡಿಸಲಾಯಿತು.

ಯೋಜನೆಯ ನಿರ್ದೇಶಕ ದಿನೇಶ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಾರುತೇಶ್, ವೃತ್ತ ನಿರೀಕ್ಷಕ ರವೀಶ್ ಕೆ.ಎನ್, ತಾ.ಪಂ ಸದಸ್ಯೆ ಗಿರಿಜಮ್ಮಾಜ್ಜಯ್ಯ, ಗ್ರಾ.ಪಂ ಅಧ್ಯಕ್ಷ ರಾಜಪ್ಪ, ತಾ.ಪಂ ಮಾಜಿ ಅಧ್ಯಕ್ಷ ಮೋಹನ್ ನಾಗರಾಜ್, ಯೋಜನಾಧಿಕಾರಿಗಳಾದ ಪ್ರಭಾಕರ್ ಹಾಗೂ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಳೆ ಬೆಲೆ ಭಾರೀ ಕುಸಿತ : ಬೆಳೆಗಾರ ಕಂಗಾಲು..!

    ರೈತ ಸಾಲ ಸೋಲ ಮಾಡಿ, ಕಷ್ಟಪಟ್ಟು ವ್ಯವಸಾಯ ಮಾಡುತ್ತಾನೆ. ಬೆಳೆದ ಬೆಲೆಗೆ ಬೆಂಬಲ ಸಿಕ್ಕರೆ ಖುಷಿಯಾಗುತ್ತಾನೆ. ಸಾಲ ತೀರಿಸಿ ಮತ್ತೆ ಭೂಮಿ ಹದ ಮಾಡುವತ್ತ ಗಮನ ಹರಿಸುತ್ತಾನೆ. ಆದರೆ ಬೆಳೆದ ಬೆಲೆಗೆ

ನವೋದಯ ವಿದ್ಯಾಲಯ: 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಚಿತ್ರದುರ್ಗ. ನ.25: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ

ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಮಹತ್ವದ ಸೂಚನೆ : ಈ ಕೆಲಸಕ್ಕೆ ಹಣ ಕೇಳಿದರೆ ದೂರು ನೀಡಿ

  ಚಿತ್ರದುರ್ಗ. ನ.25: ವಿಫಲವಾದ  ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ ನೀಡಿದೆ. ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ

error: Content is protected !!