ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಬಿಜೆಪಿ ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಬಿಜೆಪಿಯನ್ನು ಸೋಲಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿತ್ತು. ಹೋದಲ್ಲಿ ಬಂದಲ್ಲಿ ಬಿಜೆಪಿ ವಿರುದ್ಧವೇ ಭಾಷಣ ಮಾಡುತ್ತಿದ್ದರು. ಇತ್ತಿಚೆಗಷ್ಟೇ ದೊಡ್ಡ ಮಟ್ಟದ ಸಮಾವೇಶ ನಡೆಸಿದ್ದಾರೆ. ಅದಕ್ಕೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಸಾಥ್ ನೀಡಿದ್ದರು. ಇದೀಗ ಕಾಂಗ್ರೆಸ್ ಸೋಲಿಸಲು ಕೆಸಿಆರ್ ಆಫರ್ ನೀಡಿದ್ದಾರೆಂದು ಕಾಂಗ್ರೆಸ್ ಅದ್ಯಕ್ಷ ಆರೋಪ ಮಾಡಿದ್ದಾರೆ.
ಕೆಸಿಆರ್ ಬಗ್ಗೆ ಆರೋಪ ಮಾಡಿರುವ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸೋಲಿಸಲು 500 ಕೋಟಿ ಆಫರ್ ನೀಡಿದ್ದಾರೆ. ತಮ್ಮ ಫಾರ್ಮ್ ಹೌಸ್ ನಲ್ಲಿಯೇ ಇದಕ್ಕೆ ಸಂಬಂಧಿಸಿದ ಮಾತುಕತೆ ನಡೆದಿದೆ. ಅದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸೋಲಿಸಲು, ದುರ್ಬಲಗೊಳಿಸಲು ಕೆಸಿಆರ್ ಪ್ಲ್ಯಾನ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ 130 ಸ್ಥಾನ ಗೆಲ್ಲಲಿದೆ ಎಂದು ಸರ್ವೆ ಹೇಳಿದೆ. ತೆಲಂಗಾಣದ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರ ನಿಪುಣ ಸುನಿಲ್ ಕನಗೊಳ್ ಕಚೇರಿ ಮೇಲೆ ತೆಲಂಗಾಣ ಪೊಲೀಸರು ದಾಳಿ ನಡೆಸಿ, ಸರದವೆ ಮಾಡಿದ್ದಾರೆ. ಸರ್ವೆ ಬಳಿಕ ಕೆಸಿಆರ್, ಕರ್ನಾಟಕದಲ್ಲಿ 30 ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಸಲು ಪ್ಲ್ಯಾನ್ ಮಾಡಿದೆ. ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡುವ ಕೆಸಿಆರ್, ವಾಸ್ತವವಾಗಿ ಕಾಂಗ್ರೆಸ್ ಸೋಲಿಸಲು ಹೊರಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.