Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರಿಗೆ ನೌಕರರ ವೇತನ ವಿಳಂಬ; ಸರಕಾರಕ್ಕೆ ಹೆಚ್ಡಿಕೆ ತರಾಟೆ

Facebook
Twitter
Telegram
WhatsApp

ಬೆಂಗಳೂರು: ರಾಜ್ಯ ಸಾರಿಗೆ ನೌಕರಿಗೆ ವೇತನ ವಿಳಂಬ ಮಾಡುತ್ತಿರುವ ಸರಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಕೂಡಲೇ ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರನ್ನು ಒತ್ತಾಯ ಮಾಡಿದ್ದಾರೆ. ಕೋರೋನ ಮಹಾಮಾರಿಯಿಂದ ತತ್ತರಿಸಿರುವ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರ ಮೇಲೆ ಸರಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಅಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ.

ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ ತಾಯಿ ಸ್ಥಾನದಲ್ಲಿರುವ ಸರಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು. ಸಾರಿಗೆ ನೌಕರರ ಮೇಲೆ ಹಗೆತನ ಸಾಧಿಸುವುದು ಬೇಡ. ಜೀವದ ಹಂಗು ತೊರೆದು, ಮಹಾಮಾರಿಯನ್ನು ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾರಿಗೆ ನೌಕರರ ವೇತನ ವಿಳಂಬ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ತಕ್ಷಣವೇ ವೇತನ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಸಲು  ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಕೂಡಲೇ ಕ್ರಮ ವಹಿಸಬೇಕು ಎಂದು ನಾನು ಒತ್ತಾಯ ಮಾಡುತ್ತೇನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

ಪೆನ್ ಡ್ರೈವ್ ಲೀಕ್ ಮಾಡಿದ್ದು ಪ್ರಜ್ವಲ್ ರೇವಣ್ಣ ಕಾರು ಡ್ರೈವರ್..? ದೇವರಾಜೇಗೌಡ ಹೇಳಿದ್ದೇನು..?

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಈಗಾಗಲೇ ಸಾಕಷ್ಟು ಜನರ ಕೈಗೆ ಸಿಕ್ಕಿದೆ. ಮೂರು ಸಾವಿರಕ್ಕೂ ಹೆಚ್ಚು ವಿಡಿಯೋಗಳು ಇವೆ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ

error: Content is protected !!