ಲಕ್ನೋ: ಲಿಂಖಿಪುರದಲ್ಲಿ ನಡೆದ ರೈತರ ಮೇಲೆ ಕಾರು ಹತ್ತಿಸಿದ ಘಟನೆಗೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಕೇಂದ್ರ ಸಚಿವ ಅಜಯ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗ ಅಲ್ಲಿರಲಿಲ್ಲ ಎಂದಿದ್ದಾರೆ.
ಕಾರ್ಯಕ್ರಮವೊಂದಕ್ಕೆ ಬರ್ತಿದ್ದ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಕಾರನ್ನ ರೈತರು ತಡೆಹಿಡಿಯಲಾಗಿತ್ತು. ಕರತಷಿ ಕಾಯ್ದೆ ವಿರೋಧಿಸಿ ಕಾರ್ಯಕ್ರಮಕ್ಕೆ ಹೋಗದಂತೆ ತಡೆಹಿಡಿದಿದ್ದರು. ಆದ್ರೆ ಈ ವೇಳೆ ಇಬ್ಬರು ರೈತರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಸಾಕಷ್ಟು ವಿರೀಧ ವ್ಯಕ್ತವಾಗಿದ್ದು, ಅಪಾರಾಧ ಮಾಡಿದವರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.
ಇನ್ನು ಒಂದು ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಚಲಾಯಿಸುತ್ತಿದ್ದ ಎಂದು ಆಶಿಸ್ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಲಖಿಂಪುರ ಖೇರಿಯ ಹಿಂಸಾಚಾರದ ಬಳಿಕ ಅಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾಗಲು ಬಂದಿದ್ದ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಜಯ್ ಮಿಶ್ರಾ ಅವರ ಮಗ ಆಶಿಶ್ ಸೇರಿದಂತೆ ಇನ್ನಿತರರ ವಿರುದ್ಧ ಕೇಸ್ ದಾಖಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅಜಯ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದು, ರೈತರ ಹತ್ಯೆ ನಡೆದ ಸ್ಥಳದಲ್ಲಿ ನನ್ನ ಮಗ ಇದ್ದುದಕ್ಕೆ ಸಾಕ್ಷಿ ಸಿಕ್ಕಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದಿದ್ದಾರೆ. ಭಾನುವಾರ ರಾತ್ರಿ ಆ ಸ್ಥಳದಲ್ಲಿ ನನ್ನ ಮಗ ಆಶಿಶ್ ಇರಲೇ ಇಲ್ಲ. ಅವನು ಅಲ್ಲಿದ್ದ ಎಂಬುದಕ್ಕೆ ಯಾವುದೇ ಫೋಟೋ, ವೀಡಿಯೋಗಳ ಸಾಕ್ಷಿಯಿಲ್ಲ. ಆದರೆ ಆತ ಅಲ್ಲಿರಲಿಲ್ಲ ಎಂಬುದಕ್ಕೆ ನನ್ನ ಬಳಿ ವೀಡಿಯೋ ಸಾಕ್ಷಿಗಳಿವೆ. ವಿನಾಕಾರಣ ಅವನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಆಶಿಶ್ ಭಾನುವಾರ ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂದಿದ್ದಾರೆ.