Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರೀತಂ ಗೌಡ ಸೋಲಿಸಲು ಸಿದ್ದರಾದರಾ ಭವಾನಿ ರೇವಣ್ಣ..? ಜನರ ಮುಂದೆ ಹೇಳಿದ್ದೇನು..?

---Advertisement---

 

ಹಾಸನ: ರಾಜ್ಯ ರಾಜಕಾರಣದಲ್ಲಿ ಪ್ರಚಾರ ಕಾರ್ಯ ಜೋರಾಗಿದೆ. ಜೆಡಿಎಸ್ ನಲ್ಲಿ ಇದೀಗ ಭವಾನಿ ರೇವಣ್ಣ ಫುಲ್ ಆಕ್ಟೀವ್ ಆಗಿದ್ದಾರೆ. ಜನರ ಬಳಿ ಹೋಗಿ ಮತಬೇಟೆ ಶುರು ಮಾಡಿಕೊಂಡಿದ್ದಾರೆ. ಈ ಬಾರಿ ಅವರ ಸ್ಪರ್ಧೆ ಪ್ರೀತಂ ಗೌಡ ವಿರುದ್ಧ ಎಂಬ ಕುರುಹು ನೀಡಿದ್ದಾರೆ. ಹಾಸನದಲ್ಲಿ ಈ ಬಾರಿ ಹೈವೋಲ್ಟೇಜ್ ಚುನಾವಣೆ ನಡೆಯೋದು ಗ್ಯಾರಂಟಿ.

ಸದ್ಯ ಹಾಸನದಲ್ಲಿ ಬಿಜೆಪಿಯ ಶಾಸಕರಿದ್ದಾರೆ. ಪ್ರೀತಂಗೌಡ ಬಿಜೆಪಿಯಿಂದ ಗೆದ್ದಿದ್ದಾರೆ. ಆದ್ರೆ ಹಾಸನದಲ್ಲಿ ಯಾವಾಗಲೂ ಜೆಡಿಎಸ್ ಹಾಗೂ ಬಿಜೆಪಿ ನಡುವೆ ತಿಕ್ಕಾಟ ನಡೆಯುತ್ತಲೇ ಇರುತ್ತದೆ. ಇಬ್ಬರ ನಡುವೆ ಮಾತಿನ ಸಮರ ನಡೆಯುತ್ತಲೇ ಇರುತ್ತದೆ. ಹೀಗಾಗಿ ಈ ಬಾರಿ ಪ್ರೀತಂ ಗೌಡರನ್ನು ಸೋಲಿಸಲು ಭವಾನಿ ರೇವಣ್ಣ ಸಿದ್ಧರಾಗಿದ್ದಾರೆ ಎನ್ನಲಾಗುತ್ತಿದೆ.

 

ಕೇತನಹಳ್ಳಿಯಲ್ಲಿ ಭವಾನಿ ರೇವಣ್ಣ ಮಾತನಾಡುವಾಗ, ಈ ವಿಚಾರ ತಿಳಿಸಿದ್ದಾರೆ. ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಾಗಿದೆ. ಹೀಗಾಗಿ ಸರಿಯಾಗಿ ಏನು ಆಗಿಲ್ಲ. ಕೆಲಸ ಹಾಗೇ ಉಳಿದುಕೊಂಡು ಬಿಟ್ಟಿದೆ. ಆದರೆ ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ ನನ್ನನ್ನು ಅಭ್ಯರ್ಥಿ‌ ಮಾಡಬೇಕೆಂದು ಮಾತನಾಡಿಕೊಂಡು ನಿರ್ಣಯ ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಅನೌನ್ಸ್ ಮಾಡಲಿದ್ದಾರೆ. ಅದಕ್ಕೂ ಮುನ್ನ ಊರಿನ ಪರಿಚಯ ಇದ್ದರೆ ಕೆಲಸ ಮಾಡಲು ನನಗೂ ಸುಲಭ. ಆ ಭಗವಂತನ ಆಶೀರ್ವಾದ ಇರಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment