Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಲಿಷ್ಠ ದೇಶದ ನಿರ್ಮಾಣದಲ್ಲಿ ಸಂವಿಧಾನವು ಪ್ರಮುಖ ಪಾತ್ರವಹಿಸುತ್ತದೆ : ಪ್ರೊ.ಎಸ್. ಸಂದೀಪ

Facebook
Twitter
Telegram
WhatsApp

ಚಿತ್ರದುರ್ಗ: ಸಧೃಢ ದೇಶದ ನಿರ್ಮಾಣದಲ್ಲಿ ಸಂವಿಧಾನವು ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡಿದೆ ಎಂದು ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷರಾದ ಪ್ರೊ.ಎಸ್.ಸಂದೀಪ್ ಹೇಳಿದರು.

ನಗರದ ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ-ಚಿತ್ರದುರ್ಗ ಗಂಡುಗಲಿ ಕುಮಾರರಾಮವೇದಿಕೆ ಮಹಾರಾಣಿ ಕಾಲೇಜಿನ ಆವರಣದಲ್ಲಿ ಗುರುವಾರ 74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸ್ವತಂತ್ರ ಪೂರ್ವ ಭಾರತದಲ್ಲಿ ಶಿಕ್ಷಣ ಹಿಂದುಳಿದ ವರ್ಗಗಳಿಗೆ ಮರಿಚಿಕೆಯಾಗಿತು.್ತ ಆದರೆ ಸಂವಿಧಾನ ಜಾರಿಯಾದ ನಂತರ ಶಿಕ್ಷಣ ಸಾರ್ವತ್ರಿಕಗೊಂಡಿತು. ಅದರ ಫಲಿತಗಳೇ ನಾವೆಲ್ಲ ನಮ್ಮ ಸಂಸ್ಕøತಿಯ ಆಚರಣೆಗಳು ಆಚರಿಸುವುದಕ್ಕೆ ಸಂವಿಧಾನವು ನಮಗೆ ಹಕ್ಕುಗಳನ್ನು ನೀಡಿದೆ. ಅಂಬೇಡ್ಕರ್ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದ್ದಾರೆ. ಯಾವ ದೇಶದಲ್ಲಿ ಸಂವಿಧಾನ ಬಲಿಷ್ಠವಾಗಿದೆಯೋ ಆ ದೇಶದ ನಾಗರಿಕರು ನೆಮ್ಮದಿ ಮತ್ತು ಸುಖದಜೀವನವನ್ನು ಕಳೆಯುತ್ತಾರೆ ಎಂದರು.

ದೇಶದ ಪ್ರತಿ ಪ್ರಜೆಯು ಸಂವಿಧಾನದ ಕನಿಷ್ಠ ಅರಿವು ಮತ್ತು ಪ್ರಜ್ಞೆ ಹೊಂದಲೇಬೇಕು. ಭಾರತವು ಹಳ್ಳಿಗಳ ದೇಶ ಹಳ್ಳಿಗಳೂ ಉದ್ಧಾರವಾದರೆ, ದೇಶವು ಸುಧಾರಣೆಗೊಳ್ಳುತ್ತದೆ. ಸಂವಿಧಾನದ ಆಶಯ ಕೂಡ ಅದೇ ಆಗಿದೆ. ಸಂವಿಧಾನದ ಪ್ರಜ್ಞೆಯ ಕೊರತೆ ಕಾರಣದಿಂದಾಗಿಯೇ ದೌರ್ಜನ್ಯ, ಭ್ರಷ್ಟಾಚಾರದಂತ ಸಾಮಾಜಿಕ ಪಿಡುಗುಗಳು ನಮ್ಮನ್ನು ಕಾಡುತ್ತಿವೆ.

ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದ ನಮ್ಮ ದೇಶಕ್ಕೆ ಚಿಕಿತ್ಸಕ ರೂಪದಲ್ಲಿ ಎಲ್ಲರೂ ಒಪ್ಪುವಂತಹ ಸಂವಿಧಾನ ನೀಡಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಮಹಾನೀಯರು ಸ್ವಾರ್ಥಕ್ಕಾಗಿ ಬದುಕುವುದಿಲ್ಲ ಸಮಾಜ ಸೇವೆಯೇ ಅವರ ಅದಮ್ಯ ಉದ್ದೇಶವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.

ನಮ್ಮ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯುತ್ತಮ ಸಂವಿಧಾನವಾಗಿದೆ. ದೇಶದ ಎಲ್ಲ ಧರ್ಮೀಯರಿಗೂ ಅವರದೇ ಧರ್ಮದ ಹಕ್ಕು, ರಕ್ಷಣೆ, ಸಹಬಾಳ್ವೆಯ ಘನತೆಯನ್ನು ನೀಡಿದ್ದು ಸಂವಿಧಾನದ ಹೆಮ್ಮೆಯಾಗಿದೆ. ಭಾರತದ ಪ್ರಜೆಗಳು ಬೇರೆ ದೇಶಗಳಿಗಿಂತಲೂ ಹೆಚ್ಚು ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕುಗಳನ್ನು ಪಡೆದಿದ್ದಾರೆ ಎನ್ನುವುದು ಸಂವಿಧಾನದ ಓದಿನಿಂದ ಅರಿವಿಗೆ ಬರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯಕ್ಕಾಗಿ, ಸಂವಿಧಾನವನ್ನು ಹೆಚ್ಚು ಹೆಚ್ಚು ಅಧ್ಯಯನ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಝಾನ್ಸಿಲಕ್ಷ್ಮಿ, ಸಂಸ್ಥೆಯ ಕಾರ್ಯದರ್ಶಿ ವೈ.ಬಿ.ದಿವ್ಯಸರಸ್ವತಿ, ಆಡಳಿತಾಧಿಕಾರಿ ಎಸ್.ಸಾಗರ್ ಸೇರಿದಂತೆ ಸಂಸ್ಥೆಯ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳ ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 09 ರಂದು ಹಿರಿಯೂರು ಬಂದ್

ಹಿರಿಯೂರು, ನವೆಂಬರ್. 25 : ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ ಸಂಘದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 160ನೇ ದಿನಕ್ಕೆ ಕಾಲಿಟ್ಟಿತು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಮಾಣ ಸಮಾರಂಭ : ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಡಿ.ಕುಂಬಾರ್ ಅವರಿಂದ ಉದ್ಘಾಟನೆ  

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಉನ್ನತ ಶಿಕ್ಷಣ ಜಾಗತಿಕ ಮಟ್ಟದಲ್ಲಿ ಬದಲಾವಣೆಯಾಗುತ್ತಿರುವುದರಿಂದ ತಂತ್ರಜ್ಞಾನದ ಬಗ್ಗೆ ಜ್ಞಾನ ಬೆಳೆಸಿಕೊಂಡರೆ

ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿ : ಟ್ರೋಫಿ ಗೆದ್ದ ಚಿತ್ರದುರ್ಗ ವಕೀಲರ ತಂಡ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಹರಿಹರದಲ್ಲಿ ನವೆಂಬರ್ 23 ಮತ್ತು 24 ರಂದು ನಡೆದ ಅಂತರ್ ಜಿಲ್ಲಾ

error: Content is protected !!