Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜವಾಹರ ನವೋದಯ ವಿದ್ಯಾಲಯ 06 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ : ಫೆಬ್ರವರಿ 08 ರವರೆಗೆ ಅವಧಿ ವಿಸ್ತರಣೆ

---Advertisement---

ಚಿತ್ರದುರ್ಗ,(ಜ. 30)  : ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2023-24ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಅವಧಿಯನ್ನು ಫೆಬ್ರವರಿ 08 ರವರೆಗೂ ವಿಸ್ತರಿಸಲಾಗಿದೆ.

ಅರ್ಜಿಯನ್ನು

https://navodaya.gov.in ಮತ್ತು  https://cbseitms.rcil.gov.in/nvs  ವೆಬ್ ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು, 2022-23ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 2011 ರ ಮೇ. 01 ರಿಂದ 2013 ರ ಏಪ್ರಿಲ್ 30 ರ ನಡುವೆ ಜನಿಸಿರಬೇಕು.

ಪ್ರವೇಶ ಪರೀಕ್ಷೆಯು 2023 ರ ಏಪ್ರಿಲ್ 29 ರಂದು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಡುವಳ್ಳಿ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...