Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಷ್ಠರೋಗದ ಬಗ್ಗೆ ಭಯ ಬೇಡ, ಸಕಾಲದಲ್ಲಿ ಚಿಕಿತ್ಸೆ ಅಗತ್ಯ : ಡಾ. ರೇಣುಪ್ರಸಾದ್

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ಜ. 30 : ಕುಷ್ಠ ರೋಗದ ಬಗ್ಗೆ ಭಯ ಪಡುವ ಅಗತ್ಯವಿಲ್ಲ.  ಸಕಾಲದಲ್ಲಿ ಇದಕ್ಕೆ ಚಿಕಿತ್ಸೆ ಪಡೆದಲ್ಲಿ, ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣು ಪ್ರಸಾದ್ ಹೇಳಿದರು.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರದಂದು ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜಾಥ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಬಳಿಕ ಈ ಕುರಿತು ಮಾತನಾಡಿದರು.

ಕುಷ್ಠರೋಗ ಸಂಪೂರ್ಣ ಗುಣಮುಖ ಹೊಂದುವ ಖಾಯಿಲೆ,  ಕುಷ್ಠರೋಗವನ್ನು ಶೀಘ್ರ ಪತ್ತೆ ಹಚ್ಚಿ ನಿಗಧಿತ ಸಂಪೂರ್ಣ ಚಿಕಿತ್ಸೆಯನ್ನು ಪಡೆದು ನಿಯಮಿತ ವ್ಯಾಯಾಮ ಮಾಡಿದಲ್ಲಿ ಕುಷ್ಠರೋಗದಿಂದ ಸಂಪೂರ್ಣ ಗುಣಮುಖ ಹೊಂದಬಹುದು. ಬಹುವಿಧ ಔಷಧಿ ಚಿಕಿತ್ಸೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ.  ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ, ಕುಷ್ಠರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ನೀಡೋಣ ಎಂದರು.

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾದಲ್ಲಿ  “ಕುಷ್ಠರೋಗದ ವಿರುದ್ಧ ಹೋರಾಡೋಣ ಮತ್ತು ಕುಷ್ಠರೋಗವನ್ನು ಇತಿಹಾಸವಾಗಿಸೋಣ” ಎಂಬ ಘೋಷಣೆಯೊಂದಿಗೆ, ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಯಿತು.

ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂ.ಬಿ ಹನುಮಂತಪ್ಪ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ,  ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್ ಮಂಜುನಾಥ್, ಮೂಗಪ್ಪ, ಡಿ.ಎಲ್.ಒ ಕಛೇರಿ ಡಿ.ಎನ್.ಟಿ ತಂಡದ ಮೇಲ್ವಿಚಾಕರಾದ ವೈ.ತಿಪ್ಪೇಶಿ, ಕೆ.ರಾಜೇಂದ್ರ ಪ್ರಸಾದ್, ಚಂದ್ರಪ್ಪ ಎಂ, ಕಿರಣ್ ಯು, ಮಂಜುನಾಥ್ ಪಿ.ಎಂ.ಡಬ್ಲೂ, ಆಶಾ ಕಾರ್ಯಕರ್ತೆಯರು ಮತ್ತು ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ಮತ್ತಿತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್ : ಅಜ್ಜ, ಅಜ್ಜಿ ಬಗ್ಗೆ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಸುದ್ದಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದಾದ್ಯಂತೆ ಸದ್ದು ಮಾಡುತ್ತಿದೆ. ನಟಿ ಮಣಿಯರು ಕೂಡ ಇದಕ್ಕೆ ಆಕ್ರೋಶಿತರಾಗಿ ಮಾತನಾಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮೊ

error: Content is protected !!