ನವದೆಹಲಿ: 2023- 24ರ ಸಾಲಿನ ಕೇಂದ್ರ ಬಜೆಟ್ ಗೆ ಸಮಯ ಶುರುವಾಗಿದೆ. ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೊನೆಯ ಬಾರಿ ಬಜೆಟ್ ಮಂಡನೆ ಮಾಡಲಿದೆ. ಬಜೆಟ್ ಮಂಡನೆಗೂ ಮುನ್ನ ಇಂದಿನಿಂದನೇ ಬಜೆಟ್ ಅಧಿವೇಶನ ಆರಂಭವಾಗಿದೆ.
ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮಾ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ. ಈ ವರ್ಷ ಭಾರತಕ್ಕೆ ತುಂಬಾ ವಿಶೇಷವಾಗಿದೆ. ಭಾರತ ಅಮೃತ ಮಹೋತ್ಸವವನ್ನುಆಚರಿಸುತ್ತಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಯುವಕರು, ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಿದೆ. ಜಾಗತಿಕ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಪ್ರಯತ್ನವೂ ನಡೆಯುತ್ತಿದೆ. ಬಡತನ ನಿರ್ಮೂಲನೆಗೆ ಸರ್ಕಾರದಿಂದ ನಿರಂತರ ಶ್ರಮ ವಹಿಸಲಾಗುತ್ತಿದೆ. ಜಾಗತಿಕ ಸಮಸ್ಯೆಯಾಗಿರುವ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸಲಾಗುತ್ತಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹಕ್ಕೆ ದಿಟ್ಟ ಹೆಜ್ಜೆ ಇಡುತ್ತೇವೆ. ಕೇಂದ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜಲಮಿಷನ್ ಯೋಜನೆಯಡಿ ಕುಡಿಯುವ ನೀರು ಜಾರಿಗೆ ತಂದಿದೆ ಎಂದು ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.
ಇನ್ನು ನಾಳೆ ಮಂಡಿಸಲಿರುವ ಬಜೆಟ್ ಮೇಲೆ ಜನಸಾಮಾನ್ಯರಿಗೆ ಅಪಾರವಾದ ನಿರೀಕ್ಷೆ ಇದೆ. ಬಡ, ಮಧ್ಯಮವರ್ಗ, ಸಣ್ಣ ಹಾಗೂ ದೊಡ್ಡ ಉದ್ದಿಮೆದಾರರು, ಕಾರ್ಪೋರೇಟ್ ಉದ್ಯಮಿಗಳು ಬಜೆಟ್ ಮೇಲೆ ಕಣ್ಣಿಟ್ಟಿದ್ದಾರೆ. ತೆರಿಗೆ ಕಡಿತ, ಆದಾಯ ತೆರಿಗೆ, ಉದ್ಯೋಗ ಸೃಷ್ಠಿ ಹೀಗೆ ಮುಂತಾದ ವಿಚಾರಗಳ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.