ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ : ಚಿತ್ರದುರ್ಗ ತಹಶೀಲ್ದಾರ್ ಆಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಡಾ.ನಾಗವೇಣಿರವರನ್ನು ಜಾನಪದ ಜಾಗೃತಿ ಪರಿಷತ್ ವತಿಯಿಂದ ಗುರುವಾರ ಅಭಿನಂದಿಸಲಾಯಿತು.
ಜಿ.ಹೆಚ್.ಸತ್ಯನಾರಾಯಣರವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಆಗಮಿಸಿರುವ 2014 ರ ಕೆ.ಎ.ಎಸ್. ಬ್ಯಾಚ್‍ನ ತಹಶೀಲ್ದಾರ್ ಡಾ.ನಾಗವೇಣಿ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತ ಕೆಲಸದ ನಿಮಿತ್ತ ಕಚೇರಿಗೆ ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುತುವರ್ಜಿ ವಹಿಸುತ್ತೇನೆ. ಅದಕ್ಕೆ ಎಲ್ಲರ ಸಹಕಾರ ಅತಿ ಮುಖ್ಯ ಎಂದು ಕೋರಿದರು.
ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಹೆಚ್.ಪ್ಯಾರೇಜಾನ್, ಜಿಲ್ಲಾಧ್ಯಕ್ಷ ಎಂ.ಬಿ.ಕೃಷ್ಣಪ್ಪ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಚಿದಾನಂದಪ್ಪ, ಓಂಕಾರಪ್ಪ, ಮಹಲಿಂಗಪ್ಪ ಯಾದವ್, ಕಿರಣ್‍ಕುಮಾರ್, ಗ್ರೇಡ್ ಟು ತಹಶೀಲ್ದಾರ್ ಬೀಬಿ ಫಾತಿಮ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.