ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಫೆ.03) : ಚಿತ್ರದುರ್ಗ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರ ಬೋಗಸ್ ಕಾರ್ಡ್‍ಗಳ ರದ್ದತಿ ಅಭಿಯಾನವನ್ನು 2023ರ ಜನವರಿ 25 ರಿಂದ ಫೆಬ್ರವರಿ 25 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.
ನಕಲಿ ದಾಖಲೆ ಸೃಷ್ಠಿಸಿ ಗುರುತಿನ ಚೀಟಿ ಪಡೆದಿರುವ ಕಟ್ಟಡ ಕಾರ್ಮಿಕರಲ್ಲದ ಫಲಾನುಭವಿಗಳು ತಮ್ಮ ಸ್ವ-ಇಚ್ಚೆಯಿಂದ ಸಂಬಂಧಿಸಿದ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕ ನಿರೀಕ್ಷಕರ ಕಚೇರಿಗೆ ಹೋಗಿ ಮಂಡಳಿಯ ಮೂಲ ಗುರುತಿನ ಚೀಟಿಗಳನ್ನು ಹಿಂದಿರುಗಿಸಲು ಸೂಚಿಸಿದೆ.
ತಪ್ಪಿದಲ್ಲಿ ಕಾರ್ಮಿಕ ನಿರೀಕ್ಷಕರು ಖುದ್ದು ಸ್ಥಳ ಪರಿಶೀಲನೆ ನಡೆಸಿ, ನಕಲಿ ದಾಖಲೆ ಸೃಷ್ಠಿಸಿ ಗುರುತಿನ ಚೀಟಿ ಪಡೆದ ಮತ್ತು ಸೌಲಭ್ಯಗಳನ್ನು ಪಡೆದ ಫಲಾನುಭವಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.