ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಫೆ.04) : ಕುಡಿಯುವ ನೀರು, ವಸತಿ, ಸಾರಿಗೆ ಸೇರಿದಂತೆ ಭಕ್ತಾಧಿಗಳಿಗೆ ಯಾವುದೇ ರೀತಿಯ ಮೂಲಸೌಕರ್ಯಗಳ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ. ಸೂಚಿಸಿದರು.
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠದ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ ದೊಡ್ಡ ರಥೋತ್ಸವದ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು
ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಜಾತ್ರಾ ಮಹೋತ್ಸವಕ್ಕೆ 3 ರಿಂದ 4 ಲಕ್ಷ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ.
ನೀರಿನ ಅಗತ್ಯತೆಗಾಗಿ 40 ಟ್ಯಾಂಕರ್ ಗಳನ್ನು ಒದಗಿಸಬೇಕು, ಕುಡಿಯುವ ನೀರು ಪೂರೈಸುವ ನೀರಿನ ಮೂಲಗಳ ಗುಣಮಟ್ಟದ ಬಗ್ಗೆ ಪರೀಕ್ಷೆ ನಡೆಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದ ಜಿಲ್ಲಾಧಿಕಾರಿಗಳು, ಈ ಬಾರಿಯ ಜಾತ್ರೆಯನ್ನು ಎಲ್ಲರ ಸಹಕಾರ ಹಾಗೂ ಸಮನ್ವಯದಿಂದ ಅದ್ಧೂರಿಯಾಗಿ ವ್ಯವಸ್ಥಿತವಾಗಿ, ಸುಗಮವಾಗಿ ಜಾತ್ರೆ ನಡೆಸೋಣ, ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.