ಬಿ.ಎನ್.ಮಲ್ಲೇಶ್ ಅವರಿಗೆ ಮುಖ್ಯಮಂತ್ರಿಗಳಿಂದ ನಾಡಿಗೇರ ಕೃಷ್ಣರಾಯ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರದಾನ

suddionenews
1 Min Read

ವಿಜಯಪುರ.(ಫೆ. 04) : ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರತಿಷ್ಠಿತ ನಾಡಿಗೇರ ಕೃಷ್ಣರಾಯ ವಾರ್ಷಿಕ ರಾಜ್ಯ ಪ್ರಶಸ್ತಿಯನ್ನು ‘ದಾವಣಗೆರೆ ನಗರವಾಣಿ’ ದಿನಪತ್ರಿಕೆ ಸಹ ಸಂಪಾದಕರು, ಹಿರಿಯ ಸಾಹಿತಿ ಬಿ.ಎನ್.ಮಲ್ಲೇಶ್ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರದಾನ ಮಾಡಿದರು.

ವಿಜಯಪುರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಶನಿವಾರ ಆರಂಭಗೊಂಡ ಎರಡು ದಿನಗಳ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಮಟ್ಟದ 37 ನೇ ಸಮ್ಮೇಳನದಲ್ಲಿ ಬಿ.ಎನ್.ಮಲ್ಲೇಶ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಟಿವಿ-9 ಸುದ್ದಿ ವಾಚಕಿ ಸುಕನ್ಯಾ ಇತರರಿಗೆ ಇದೇ ವೇಳೆ ಸಿಎಂ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಸಿ.ಸಿ.ಪಾಟೀಲ್. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಇತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *