Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿರಿಗೇರಿ ಜೆಎಚ್ ವಿ ಶಾಲೆಯ  ವಾರ್ಷಿಕೋತ್ಸವ : ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ

Facebook
Twitter
Telegram
WhatsApp

ಸಿರಿಗೇರಿ : ಸ್ಥಳೀಯ ಜೆಎಚ್ ವಿ ಖಾಸಗಿ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆದ ಶಾಲೆಯ ವಾರ್ಷಿಕೋತ್ಸವ ದಿನವನ್ನು ಆಚರಿಸಲಾಯಿತು. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಪ್ರಯತ್ನದಲ್ಲಿ ಹೆಸರು ಮಾಡಿರುವ ಸ್ಥಳೀಯ ಜೆಎಚ್ ವಿ ಶಾಲೆಯು, ಗ್ರಾಮದಲ್ಲಿ ಸಾಮಾಜಿಕವಾಗಿ ತನ್ನದೇ ಆದ ಸೇವಾ ಮನೋಭಾವದಿಂದ ಕೆಲವು ಚಟುವಚಟುವಟಿಕೆಗಳನ್ನು ನಡೆಸುತ್ತಾ ಬಂದದ್ದು, ಈ ವರ್ಷದ ತಮ್ಮ ಶಾಲೆಯ ವಾರ್ಷಿಕೋತ್ಸವದಲ್ಲಿ, ಕೆಲವು ವಿಭಾಗದ ಪದವಿಗಳನ್ನು ಹಾಗೂ ಉನ್ನತ ಸಾಧನೆ ಮಾಡಿ ಹೆಸರು ಮಾಡಿದ ಸ್ಥಳೀಯ ಯುವಕರನ್ನು ಗುರುತಿಸಿ ಸನ್ಮಾನ ಮಾಡಿದ್ದು, ವಿಶೇಷವಾಗಿತ್ತು.

ಇದೇ ಕಾರ್ಯಕ್ರಮದಲ್ಲಿ 2022ನೇ ಸಾಲಿನ ನವದೆಹಲಿಯಲ್ಲಿ ನಡೆದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಮಾಡುವ ಡಾ. ಬಿ. ಅರ್. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ ಪಡೆದುಕೊಂಡ ಬೆಂಗಳೂರು ವಿಶ್ವವಿದ್ಯಾಲಯದ  ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಪ್ರೊ.ಡಾ. ಬಿ.ಕೆ. ರವಿ ರವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಕೈಗೊಂಡಿರುವ ಸಂಶೋಧನಾ ವಿದ್ಯಾರ್ಥಿ ಈಶ್ವರ್ ರವರಿಗೆ, ವಿಎಸ್ ಜೆಯುವಿಯ ವಾಣಿಜ್ಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಪಡೆದ ಡಾ. ಮೌನೇಶ್, ಬೆಂವಿವಿಯ ಡ್ರಾಮ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಾಜಶೇಖರ್ ವೈ, ವಿಎಸ್ ಜೆಯುವಿಯ ಯು.ಜಿ. ಡಿಪ್ಲೊಮಾದಲ್ಲಿ ಚಿನ್ನದ ಪದಕ ಪಡೆದ ಬಸವರಾಜ್ ವಿ ಇವರನ್ನು ಪ್ರತ್ಯೇಕವಾಗಿ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ದೊಡ್ಡನಗೌಡ ಮಾತನಾಡಿ ಇಲ್ಲಿಯವರೆಗೆ ಗ್ರಾಮೀಣ ಭಾಗದಲ್ಲಿ ಸಂಸ್ಥೆಯು ಕಾರ್ಯ ನಿರ್ವಹಿಸಿಕೊಂಡು ಬಂದಿರುವ ಬಗೆಯನ್ನು ವಿವರಿಸಿ, ಎಲ್ಲಾ ರೀತಿಯಿಂದಲೂ ಅನುಕೂಲತೆಗಳನ್ನು ಹೊಂದಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಯುವಕರು ಅನೇಕ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡಲು ಮುಂದೆ ಬರುವಂತೆ ಕರೆ ನೀಡಿದರು.

ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ ಸಿರುಗುಪ್ಪ ತಾಲೂಕು ಬಿಜೆಪಿ ಯುವ ಮೋರ್ಚ ಅಧ್ಯಕ್ಷರು ಹಾಗೂ ಶಾಸಕ ಎಂ.ಎಸ್. ಸೋಮಲಿಂಗಪ್ಪರವರ ಪುತ್ರ ಎಂ.ಎಸ್.ಸಿದ್ದಪ್ಪ ಮಾತನಾಡಿ ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಗ್ರಾಮೀಣ ಭಾಗದ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಮಾತ್ರ ಮುಖ್ಯ ಉದ್ದೇಶ ವಾಗಿರಬೇಕು. ಹೊರತು ಹಣ ಗಳಿಕೆಯ ಉದ್ದೇಶವನ್ನು ಹೊಂದಿರಬಾರದು. ನಮ್ಮ ಸಿರುಗುಪ್ಪ ತಾಲೂಕಿನಲ್ಲಿ ಕೆಲ ಖಾಸಗಿ ವಿದ್ಯಾಸಂಸ್ಥೆಗಳು, ವಿದ್ಯೆಗೆ ಹೆಚ್ಚಿನ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವುದು ಗಮನಿಸಿದೇನೆ. ಆ ಸಾಲಿನಲ್ಲಿ ಸಿರಿಗೇರಿಯ ಜೆಎಚ್ ವಿ ಶಾಲೆಯು ಒಂದಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂಜಾರಿ ಲಕ್ಷ್ಮಮ್ಮ ಕರಿಯಪ್ಪ, ಜೆಎಚ್ ವಿ ಎಜ್ಯುಕೇಶನ್ ಟ್ರಸ್ಟ್ ನ  ಅಧ್ಯಕ್ಷ ಜೆ. ಮಲ್ಲಿಕಾರ್ಜುನ ಗೌಡ, ಬಳ್ಳಾರಿ ಜಿಲ್ಲಾ ತೋಟಗಾರಿಕೆ ಇಲ್ಲಾಖೆಯ ನಿರ್ದೇಶಕರು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು ಹಾಗೂ ಸಿರುಗುಪ್ಪ ತಾಲೂಕು ಮಾಜಿ ಎಪಿಎಂಸಿ ಅಧ್ಯಕ್ಷ ಹಾಗಲೂರು ಮಲ್ಲನಗೌಡ, ಶಾಲೆಯ ಕಾರ್ಯದರ್ಶಿ ಪ್ರೊ.ಜೆ. ದೊಡ್ಡನಗೌಡ, ಮುಖ್ಯೋಪಾಧ್ಯಾಯ ವಿರೂಪಾಕ್ಷ ಗೌಡ,   ಶಾಲೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ,  ವಿದ್ಯಾರ್ಥಿಗಳು, ಪೋಷಕರು, ಗ್ರಾಮದ ಮುಖಂಡರು, ನಾನಾ ಸಂಘಟನೆಗಳ ಪದಾಧಿಕಾರಿಗಳು, ಮತ್ತಿತರರು ಇದ್ದರು.

ನಮ್ಮ ಸಿರುಗುಪ್ಪ ತಾಲೂಕಿನಲ್ಲಿ ಕೆಲ ಖಾಸಗಿ ವಿದ್ಯಾ ಸಂಸ್ಥೆಗಳು, ವಿದ್ಯೆಗೆ ಹೆಚ್ಚಿನ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವುದು ಗಮನಿಸಿದೇನೆ. ಆ ಸಾಲಿನಲ್ಲಿ ಸಿರಿಗೇರಿಯ ಜೆಎಚ್ ವಿ ಶಾಲೆಯು ಒಂದಾಗಿದೆ ಎಂದು
ಎಂ.ಎಸ್. ಸಿದ್ದಪ್ಪ ಹೇಳಿದರು.

– ಎಂ.ಎಸ್. ಸಿದ್ದಪ್ಪ
ಸಿರುಗುಪ್ಪ ತಾಲೂಕು ಬಿಜೆಪಿ ಯುವ ಮೋರ್ಚ ಅಧ್ಯಕ್ಷರು ಹಾಗೂ ಶಾಸಕ ಎಂ.ಎಸ್.ಸೋಮಲಿಂಗಪ್ಪರವರ ಪುತ್ರ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!