Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ನಡೆದ ತುರುವನೂರು ಶ್ರೀ ಆಂಜನೇಯ ಸ್ವಾಮಿ ಉಚ್ಛಾಯ ಮಹೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.07) : ತಾಲ್ಲೂಕಿನ ತುರುವನೂರು ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಉಚ್ಛಾಯ ಮಹೋತ್ಸವವು ಶ್ರದ್ಧಾ ಭಕ್ತಿಗಳಿಂದ ಮಘಾ ನಕ್ಷತ್ರದಲ್ಲಿ ಅದ್ದೂರಿಯಾಗಿ ನೆರವೇರಿತು.

ನೂರಾರು ವರ್ಷಗಳ ಹಳೆಯ ತೇರಿಗೆ ವಿದಾಯ ಹೇಳಿ ಈ ವರ್ಷ ಹೊಸ ತೇರಿನಲ್ಲಿ ಆಂಜನೇಯ ಸ್ವಾಮಿಯ ಉಚ್ಚಾಯವನ್ನು ಅದ್ದೂರಿಯಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.

ಮಂಗಳವಾರ  ಬೆಳಗಿನ ಜಾವದಿಂದಲೇ
ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಗೋಪುರಕ್ಕೆ ಕಳಸಾರೋಹಣ ಹಾಗೂ ವಿಶೇಷ ಪೂಜೆ ನೆರವೇರಿಸಿ, ಉತ್ಸವ ಮೂರ್ತಿಯನ್ನು ಸಕಲ ವಾದ್ಯಗಳೊಂದಿಗೆ ಪಲ್ಲಕ್ಕಿಯಲ್ಲಿ ಮೆರವಣಿಗೆ ಮೂಲಕ ತಂದು ರಥದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಹೊಸ ತೇರಿಗೆ ದೊಡ್ಡ ಗಾತ್ರದ ಹೂವಿನ ಹಾರ ಮತ್ತು ಬಾವುಟಗಳಿಂದ ಅಲಂಕರಿಸಿ ತೆಂಗಿನಕಾಯಿ ಹೊಡೆದು ಭಕ್ತಿ ಸಮರ್ಪಿಸಿದರು.

ಶ್ರೀ ಆಂಜನೇಯ ಸ್ವಾಮಿ ಉಚ್ಚಾಯ ವಿಡಿಯೋ

ದೇವರಿಗೆ ಹಾಕಿದ್ದ ಹಾರಗಳ ಹರಾಜು ಪ್ರಕ್ರಿಯೆಯಲ್ಲಿ

ಮೊದಲನೆಯ ಹಾರವನ್ನು ಶ್ರೀಕಾಂತ ಅವರು 18001/-

ಎರಡನೆಯ ಹಾರವನ್ನು  ಹಣ್ಣಿನ ವ್ಯಾಪಾರಿ ಮೂರ್ತಿಯವರು 10001/-

ಮೂರನೆಯ ಹಾರವನ್ನು ಮಾಳಿಗೇರ ನರಸಿಂಹಪ್ಪನವರು 10001/-

ನಾಲ್ಕನೆಯ ಹಾರವನ್ನು ಮಸಿಯಪ್ಪನವರ ಶಶಿಕಲಾ ಅವರು 5001/-

ಐದನೆಯ ಹಾರವನ್ನು ಲೊಡಗಪ್ಪರ ಸುಧಾಕರ
10001/- ರೂ. ಗಳಿಗೆ ಪಡೆದು ಭಕ್ತಿ ಸಮರ್ಪಿಸಿದರು.

10: 30 ಗಂಟೆಗೆ ಹೊಸ ತೇರನ್ನು ಸಾವಿರಾರು ಭಕ್ತರು ಎಳೆದು ಸಂಭ್ರಮಿಸಿದರು. ಅಡವಿ ಆಂಜನೇಯ ಸ್ವಾಮಿ ದೇವಸ್ಥಾನದವರೆಗೂ ತೇರನ್ನು ಎಳೆದರು. ಡೊಳ್ಳು ಕುಣಿತ, ನಂದಿಧ್ವಜ ಕುಣಿತ ಮುಂತಾದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ತುರುವನೂರು ಶ್ರೀ ಆಂಜನೇಯಸ್ವಾಮಿ ಉಚ್ಛಾಯ : ಜಾತ್ರೆಯ ಹಿನ್ನೆಲೆ ಮತ್ತು ವಿಶೇಷತೆ…!

ಭಕ್ತರು ತೇರಿಗೆ ಬಾಳೆ ಹಣ್ಣು ಎಸೆದ ಧನ್ಯತಾ ಭಾವ ಮೆರೆದರು. ತುರುವನೂರು ಸೇರಿದಂತೆ  ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಸಾವಿರಾರು ಭಕ್ತರು ತಂಡೋಪ ತಂಡವಾಗಿ ಬಂದು ದೇವರ ದರ್ಶನ ಪಡೆದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಕಾಯಿ-ಕರ್ಪೂರ, ಮುಡಿಪು, ದೀಡ್‌ ನಮಸ್ಕಾರ ಹಾಕಿ ಹರಕೆ ತೀರಿಸಿದರು.

ಹೊಸ ತೇರು ಮತ್ತು ದೇವಸ್ಥಾನದ ಮುಂದೆ ನಿಂತು ಭಕ್ತರು ಮೊಬೈಲ್‌ ನಲ್ಲಿ ಫೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಸಂಭ್ರಮಿಸಿದರು.

ಮುಂಜಾಗ್ರತೆ ಕ್ರಮವಾಗಿ ಜಾತ್ರೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಶ್ರೀ ಆಂಜನೇಯ ತೇರು ಎಳೆದ ಮೇಲೆ ಮಧ್ಯಾಹ್ನ 4:30 ರ ನಂತರ ಇಳಿ ಹೊತ್ತಿನಲ್ಲಿ ಮುರುಡಪ್ಪನನ್ನು ಆತನ ಮನೆಯಲ್ಲಿ ಹೂವುಗಳಿಂದ ಅಲಂಕರಿಸಿ ಕಾಲಿಗೆ ಗಗ್ಗರ ತೊಡಿಸಿ ಗೋವಿಂದನ ನಾಮ ಸ್ಮರಣೆ, ಮಂಗಳ ವಾದ್ಯಗಳೊಂದಿಗೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕರೆತಂದು ಅಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣಿಗೆಯ ಮೂಲಕ ಅಡವಿನ ಹನುಮಂತರಾಯ ದೇವಸ್ಥಾನ ಮತ್ತು ಭೂತನಾಥನಿಗೆ ವಂದಿಸಿ ಊರಿನ ಪೂರ್ವ ದಿಕ್ಕಿನಲ್ಲಿರುವ ದೊಡ್ಡಘಟ್ಟದ ಕೆರೆ ಬಳಿಯ ಉಗ್ರನರಸಿಂಹ ಸ್ವಾಮಿಯ ದೇವಸ್ಥಾನದ ವರೆಗೂ ಕಾಲ್ನಡಿಗೆಯಲ್ಲೇ ನಡೆದು ಹೋಗಿ ಸೂರ್ಯಾಸ್ತವಾಗುತ್ತಿದ್ದಂತೆ ಅಂದರೆ ಗೋಧೂಳಿ ಸಮಯದಲ್ಲಿ ಉಗ್ರನರಸಿಂಹ ಸ್ವಾಮಿಗೆ ಪೂಜೆ ಸಲ್ಲಿಸಿ ಅಲ್ಲಿಂದ ಮತ್ತೆ ತುರುವನೂರಿಗೆ ಕಾಲ್ನಡಿಗೆಯಲ್ಲೇ ಹಿಂತಿರುಗುತ್ತಾನೆ.

ತುರುವನೂರಿನ ಅಡವಿ ದೇವಸ್ಥಾನದ ಬಳಿ ಇರುವ ಭೂತನಾಥನ ಆಶ್ರಯದಲ್ಲಿ ಸ್ಪಲ್ಪ ಕಾಲ ವಿರಮಿಸಿ ಸೂರ‍್ಯನು ಅಸ್ತಮಿಸಿದ ಮೂರು ಗಂಟೆಗಳ ಬಳಿಕ ಆ ಸ್ಥಳದಲ್ಲಿ ಗೋವಿಂದ ನಾಮಗಳಿಂದ ಸ್ಮರಿಸುತ್ತಿದ್ದಂತೆ ಪುನಃ ಪವಾಡ ನಡೆಯುತ್ತದೆ.

ಶ್ರೀ ನರಸಿಂಹಸ್ವಾಮಿ ಹಾಗೂ ಆಂಜನೇಯನ ಪ್ರವೇಶದಿಂದ ದಾಸಪ್ಪ ಪವಾಡ ಪುರಷನಾಗುತ್ತಾನೆ ಹೀಗಾಗಿ ಮುಳ್ಳಪಲ್ಲಕ್ಕಿಯಲ್ಲಿ ಸೊಪ್ಪಿನ ಪತ್ರೆ ಹರಡಿ ಅದರ ಮೇಲೆ ಮುರುಡಪ್ಪನನ್ನು ಮಲಗಿಸಿ ಮೆರವಣಿಗೆ ಮೂಲಕ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾರೆ. ಅಂದರೆ ಇದರಿಂದ ಎಲ್ಲ ದುಷ್ಟಶಕ್ತಿಗಳು ತೊಲಗಲಿ ಎಂದು ಆ ನಂತರ ಮೆರವಣಿಗೆ ಮುಗಿಯುತ್ತಿದ್ದಂತೆ ಮಧ್ಯರಾತ್ರಿ ದೇವಸ್ಥಾನದಲ್ಲಿ ತುಂಬಿಸಿಕೊಳ್ಳಬೇಕು. ಆಗ ಆಂಜನೇಯ ಮೂಲಸ್ವರೂಪದಲ್ಲಿ ಲೀನವಾಗುತ್ತಾನೆ. ಪ್ರತಿವರ್ಷ ನಡೆದುಕೊಂಡು ಬರುತ್ತಿರುವ ಪವಾಡ ಇದು.

ಇನ್ನೂ ದೇವಸ್ಥಾನದಿಂದ ಮನೆಗೆ ತೆರಳಿದ ನಂತರ ಉಪವಾಸ ಕೈಬಿಡುತ್ತಾರೆ. ಮರುದಿನ ದೇವಸ್ಥಾನಕ್ಕೆ ಬಂದು ಪೂಜೆ ನೆರವೇರಿಸುತ್ತಾರೆ .ಇದಾದ ನಂತರ ರಥೋತ್ಸವದ ಎರಡನೇ ದಿನ ಓಕುಳಿ ದಿನ ಮಂಗಳವಾದ್ಯಗಳೊಂದಿಗೆ ಶ್ರೀ ಆಂಜನೇಯ ಸ್ವಾಮಿ ಹಾಗೂ ಶ್ರೀ ಕಲ್ಲೇಶ್ವರ ಸ್ವಾಮಿಯ ಎರಡೂ ಉತ್ಸವ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿರಿಸಿಕೊಂಡು ಗಂಗಾಪೂಜೆಗೆ ಬಾವಿಗೆ ತೆರಳಿ ಪೂಜೆ ಮುಗಿಸಿಕೊಂಡು ಹಿಂತಿರುಗುವಾಗ ತುರುವಪ್ಪ ಬೇಟೆ ರಂಗಪ್ಪ ದೇವರಿಗೆ ಪೂಜೆಸಲ್ಲಿಸಿ ಅಲ್ಲಿಂದ ಕಲ್ಲೇಶ್ವರ ದೇವಸ್ಥಾನಕ್ಕೆ ಹೋಗಿ ಕಲ್ಲೇಶ್ವರ ಮೂರ್ತಿಯನ್ನು ಗುಡಿತುಂಬಿಸುತ್ತಾರೆ. ಹಾಗೆಯೇ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ತೆರಳಿ ಸ್ವಾಮಿ ಮೂರ್ತಿಯನ್ನು ಗುಡಿತುಂಬಿಸಲಾಗುತ್ತದೆ ಅಲ್ಲಿಗೆ ಆಂಜನೇಯ ಉತ್ಸವ ಮುಗಿಯುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!