ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 523 ಜನಕ್ಕೆ ಕೊರೊನಾ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 26920 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 104978 RTPCR ಟೆಸ್ಟ್ ಸೇರಿದಂತೆ ಒಟ್ಟು 131898 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 523 ಜನರಿಗೆ ರಾಜ್ಯಾದ್ಯಂತ ಕೊರೊನಾ ದೃಢಪಟ್ಟಿದೆ. ಉಳಿದಂತೆ, 205 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕೊರೊನಾದಿಂದ 9 ಜನ ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. 621 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.