Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉತ್ತಮ ಸಂಸ್ಕಾರ ರೂಢಿಸಿಕೊಂಡರೆ ಯಶಸ್ಸು ಸಾಧ್ಯ : ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಪ್ರಭು ಜಿ ಆರ್ ಜೆ

---Advertisement---

ಚಿತ್ರದುರ್ಗ, (ಫೆ.09) :  ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಡಿಸಿಕೊಳ್ಳುವುದರಿಂದ ಉನ್ನತ ಶಿಕ್ಷಣ ಪಡೆಯುವ ಜೊತೆಗೆ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಪ್ರಭು ಜಿ ಆರ್ ಜೆ ಹೇಳಿದರು.

ನಗರದ ಶಿಕ್ಷಣ ಸಂಸ್ಥೆಯಾದ ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ ಸಿ.ಬಿ.ಎಸ್.ಇ. 10 ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ  ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ 10 ವರ್ಷ ಕಷ್ಟಪಟ್ಟರೆ ಇಡೀ ಜೀವನ ಸುಖಮಯವಾಗಿರುತ್ತದೆ. ಪೌರಾಣಿಕ ಆದರಿಸಿದ ವಶಿಷ್ಠ ಮಹರ್ಷಿಗಳ ಕಥೆ ಹೇಳುವುದರೊಂದಿಗೆ ಕ್ರಮಬದ್ಧ ಅಭ್ಯಾಸ ಜೊತೆ ಜೊತೆ ಶಿಸ್ತುಬದ್ಧವಾದ ಜೀವನ ನಡೆಸಬೇಕು. ವಿದ್ಯಾರ್ಥಿಯು ಹೆಚ್ಚು ಅಂಕ ಪಡೆದು ಸಂಸ್ಕಾರ, ಮಾನವೀಯತೆ ಮರೆತರೆ ಅದು ವ್ಯರ್ಥ ಮೊದಲು ಮಾನವಗುಣವನ್ನು ಪಡೆದು ಮನುಷ್ಯರಾಗಿ ಬಾಳಬೇಕು ಎಂದರು.

ತೇಜಸ್ವಿ ಹೆಚ್. ಟಿ. ಸಹ ಪ್ರಾಧ್ಯಾಪಕರು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಜೀವನ ಅನುಭವದ ನುಡಿಮುತ್ತು ಹೇಳುವುದರೊಂದಿಗೆ ಮಕ್ಕಳಿಗೆ  ಸ್ಪೂರ್ತಿಧಾಯಕ ಮಾತುಗಳು ಮತ್ತು ವಿದ್ಯಾರ್ಥಿ ಜೀವನದ  ಗುರಿ ಮತ್ತು ಜವಬ್ಧಾರಿ ಕುರಿತು ತಮ್ಮ ಅನುಭವದ ನುಡಿಮುತ್ತುಗಳನ್ನು ತಿಳಿಸಿದರು.

ಎಸ್ ಆರ್ ಎಸ್ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಬಿ ಎ ಲಿಂಗಾರೆಡ್ಡಿ ಮಾತನಾಡಿ, ವಿದ್ಯಾರ್ಥಿ ಜೀವನ ಹೇಗಿರಬೇಕೆಂದು ಹಾಗೂ ಸಮಾಜದಲ್ಲಿ ತಮ್ಮನ್ನು ತಾವು ಹೇಗೆ ಗುರುತಿಸಿಕೊಳ್ಳಬೇಕೆನ್ನುವುದರ ಜೊತೆ ಪೋಷಕರ ಕರ್ತವ್ಯ ಕುರಿತು ಮಾತನಾಡಿದರು. ಹಾಗೂ ವಿದ್ಯಾರ್ಥಿಗಳ ಮುಂದಿನ ಪರೀಕ್ಷೆಗೆ ಶುಭಹಾರೈಸಿದರು.

ಕಾರ್ಯಕ್ರಮಕ್ಕೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಾಕ್ಷರು ಅಮೋಘ್ ಬಿ. ಎಲ್. ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್‍ಎಂ. ಎಸ್ ಪ್ರಾಂಶುಪಾಲರು ಹಾಗೂ ಶಾಲೆಯ ಶೈಕ್ಷಣಿಕ ಸಂಯೋಜಕರು, ರಾಕೇಶ್ ಬಿ. ವಿ.
ಬೋಧಕವರ್ಗ, ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸುವುದರೊಂದಿಗೆ  ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ತುಂಬು ಹೃದಯದಿಂದ ಶುಭಕೋರಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...