ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಚುನಾವಣೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಕುಟುಂಬಸ್ಥರ ವಿಚಾರ ಆಗಾಗ ಸುದ್ದಿಯಾಗುತ್ತಿದೆ. ಇತ್ತಿಚೆಗೆ ಡಿಕೆ ಶಿವಕುಮಾರ್ ರಾಮನಗರ ಕ್ಷೇತ್ರವನ್ನು ಮಗಳಿಗೆ ಬಿಟ್ಟುಕೊಟ್ಟು ಬೇರೆ ಕಡೆ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರ ಎಲ್ಲೆಡೆ ಹಬ್ಬಿತ್ತು. ಇದಕ್ಕೆ ಡಿಕೆಶಿ ಸ್ಪಷ್ಟನೆ ಕೂಡ ನೀಡಿದ್ದರು. ನನ್ನ ಕುಟುಂಬಸ್ಥರು ಯಾರು ರಾಜಕಾರಣಕ್ಕೆ ಬರಲ್ಲ ಎಂದು.
ಇದೀಗ ಅವರ ತಮ್ಮ ಡಿಕೆ ಸುರೇಶ್ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿದೆ. ಇದಕ್ಕೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್, ನಮ್ಮ ಮನೆಯಲ್ಲಿ ನನ್ನನ್ನು ಬಿಟ್ಟರೆ ಯಾರೂ ಎಂಎಲ್ಎ ಚುನಾವಣೆಗೆ ನಿಲ್ಲುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಂಪಿಯನ್ನು ಎಂಎಲ್ಎ ಮಾಡುವ ತೀರ್ಮಾನ ಇನ್ನೂ ಕೈಗೊಂಡಿಲ್ಲ ಎಂದಿದ್ದಾರೆ.
ಯಾರೂ ಬೇಕಾದರೂ ಯಾವ ತೀರ್ಮಾನವನ್ನು ಬೇಕಾದರೂ ತೆಗೆದುಕೊಳ್ಳಬಹುದು. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಮಾನವೇ ಅಂತಿಮ ಎಂದಿದ್ದಾರೆ. ಈ ಮೂಲಕ ಡಿಕೆ ಸುರೇಶ್ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್