Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೋಲಾರದಲ್ಲಿ ಕಾಂಗ್ರೆಸ್ ನವರೇ ಸೋಲಿಸಿದರೆ.. ಬೇರೆ ಕಡೆ ನಾವೂ ಸೋಲಿಸುತ್ತೇವೆ : ಸಿದ್ದರಾಮಯ್ಯರನ್ನ ಟಾರ್ಗೆಟ್ ಮಾಡಿದ ನಳೀನ್ ಕುಮಾರ್ ಕಟೀಲು..!

---Advertisement---

ಕೊಪ್ಪಳ: ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಟಾರ್ಗೆಟ್ ಆಗಿದ್ದಾರೆ. ಅವರನ್ನು ಸೋಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಇಂದು ನಳೀನ್ ಕುಮಾರ್ ಕಟೀಲು ಕೂಡ ಅದನ್ನೇ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ರಾಜಕೀಯ ನಿರುದ್ಯೋಗಿಯಾಗಲಿದ್ದಾರೆ. ಅವರು ಎಲ್ಲಿಯೇ ನಿಂತರು ಅವರನ್ನು ಸೋಲಿಸುತ್ತೇವೆ ಎಂದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಸಿಗುತ್ತಿಲ್ಲ. ಅವರುಗೆ ಸ್ವತಂತ್ರ ಕ್ಷೇತ್ರ ಸಿಗುತ್ತಿಲ್ಲ. ಪರಿಸ್ಥಿತಿ ಈ ರೀತಿ ಇರುವಾಗ ಅವರ ಪಕ್ಷ ಅಧಿಕಾರಕ್ಕೆ ಬರುವುದಾದರೂ ಹೇಗೆ..? ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಕಾಂಗ್ರೆಸ್ ನವರೇ ಅವರನ್ನು ಅಲ್ಲಿ ಸೋಲಿಸುತ್ತಾರೆ. ಬೇರೆ ಯಾವುದೇ ಕ್ಷೇತ್ರದಲ್ಲಿ ನಿಂತರೂ ನಾವೇ ಸೋಲಿಸುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ರಾಜಕೀಯ ಬಿಟ್ಟು ಭವಿಷ್ಯ ಹೇಳುವುದು ಒಳ್ಳೆಯದು. ಪ್ರಧಾನಿ ಮೋದಿಯವರು ಅಪ್ಪನಾಣೆಗೂ ಪಿಎಂ ಆಗಲ್ಲ ಅಂದಿದ್ರು ಒಂದು ಅಲ ಅಲ್ಲ ಎರಡು ಬಾರಿ ಪ್ರಧಾನಿಯಾಗಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಲ್ಲ ಅಂದಿದ್ರು ಅವರು ಸಿಎಂ ಆದರು. ಹೀಗಾಗಿ ಅವರು ಹೇಳುವುದು ಯಾವುದು ನಡೆಯುವುದಿಲ್ಲ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...