Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿಯಲ್ಲಿ‌ ಮನೆ ಕುಸಿದು ಸಾವು : ಪರಿಹಾರ ಘೋಷಿಸಿದ ಮೋದಿ

Facebook
Twitter
Telegram
WhatsApp

 

ಬೆಳಗಾವಿ : ತಾಲೂಕಿನ ಬಡಾಲ ಅಂಕಲಗಿಯಲ್ಲಿ‌ ಮನೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಬೆಳಗಾವಿಯಲ್ಲಿ ಮನೆ ಕುಸಿತದಿಂದಾಗಿ ಜೀವ ಹಾನಿಯಾಗಿರುವುದು ದುಃಖಕರ ವಿಚಾರ.. ತಮ್ಮವರನ್ನು ಕಳೆದುಕೊಂಡು ಕುಟುಂಬಸ್ಥರು ದುಃಖದಲ್ಲಿದ್ದಾರೆ. ಆ ಕುಟುಂಬಸ್ಥರೊಂದಿಗೆ ನಾವಿದ್ದೇವೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರವನ್ನು ನೀಡಲಾಗುವುದು ಎಂದಿದ್ದಾರೆ.

ಅದರಂತೆ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ‌ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇನ್ನು ಈ ಸಂಬಂಧ ರಾಜ್ಯದ ಸಿಎಂ ಕೂಡ ಪರಿಹಾರ ಘೋಷಿಸಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿ, ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ.

ಅಂಕಲಗಿಯಲ್ಲಿ ಮನೆ ಕುಸಿದ ಪರಿಣಾಮ ಒಂದೇ ಕುಟುಂಬದ ಏಳು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದರಲ್ಲಿ ಬಾಲಕಿ ಕೂಡ ಅಸುನೀಗಿದ್ದಾಳೆ. ಈ ಘಟನೆಗೆ ರಾಜ್ಯದ ಜನ ಮರುಗಿದ್ದಾರೆ. ಇದೀಗ ಪ್ರಧಾನಿ ಮೋದಿ‌ ಕೂಡ ಸಂತಾಪ ಸೂಚಿಸಿ, ಪರಿಹಾರ ಘೋಷಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ದಾವಣಗೆರೆ ಈ ಪ್ರದೇಶಗಳಲ್ಲಿ ಮೇ 9 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ.ಮೇ.8: 66/11 ಕೆ.ವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ದೀಪದ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯ ತುರ್ತು ಕಾರ್ಯವನ್ನು ನಿರ್ವಹಿಸಬೇಕಾಗಿರುವುದರಿಂದ ಮೇ.9 ರಂದು ಬೆಳಿಗ್ಗೆ 10 ರಿದ ಮಧ್ಯಾಹ್ನ 2

error: Content is protected !!