ನನ್ನ ಹೊಡೆದು ಹಾಕಲು ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದು ಬನ್ನಿ : ಸಿದ್ದರಾಮಯ್ಯ ಆಕ್ರೋಶ..!

suddionenews
1 Min Read

ಬೆಂಗಳೂರು: ಟಿಪ್ಪು ಬೇಕಾ ಸಾವರ್ಕರ್ ಬೇಕಾ.. ಹಾಗಾಗಿ ಟಿಪ್ಪು ಸುಲ್ತಾನ್ ಎಲ್ಲಿಗೆ ಕಳುಹಿಸಬೇಕು. ಹುಲಿಗೌಡ ನಂಜೇಗೌಡ ಏನು ಮಾಡಿದರು. ಹಂಗೆ ಇವರನ್ನು ಹೊಡೆದು ಹಾಕಬೇಕು ಎಂದು ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದರು. ಈ ಹೇಳಿಕೆಗೆ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಸಚಿವ @drashwathcn ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ @BSBommai ಮತ್ತು ಪ್ರಧಾನ ಮಂತ್ರಿ @narendramodi ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ.
ಮೌನ ಸಮ್ಮತಿಯ ಲಕ್ಷಣವೇ?

ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ.

ನನ್ನ ಹತ್ಯೆಗೆ @drashwathcn ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?

ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ @drashwathcn ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *