Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ನೌಕರರ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಅನುದಾನ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಫೆ.20) : ಮಕ್ಕಳ ಗಮನವನ್ನು ಅಂಕ ಗಳಿಕೆ ಮಾಡಿಕೊಳ್ಳುವತ್ತ ಮಾತ್ರ ಕೇಂದ್ರೀಕರಿಸದೆ, ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ಉತ್ತೇಜನ ನೀಡಬೇಕು ಎಂದು ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಉದ್ಘಾಟಸಿ ಮಾತನಾಡಿದರು.

ವರ್ಷವಿಡೀ ಆರೋಗ್ಯದ ಕಾಳಜಿ ಸಹ ಮಾಡದೇ ಸರ್ಕಾರಿ ಕೆಲಸಗಳಲ್ಲಿ ನೌಕರರು ತೊಡಗಿಕೊಳ್ಳುತ್ತಾರೆ.  ಹಿಂದೆ ಕ್ರೀಡೆಯಲ್ಲಿ ಸಾಧನೆ ಮಾಡಿದ ಸರ್ಕಾರಿ ನೌಕರರಿಗೆ ಉತ್ತಮ ಪ್ರಾತಿನಿಧ್ಯ ನೀಡಲಾಗುತ್ತಿತ್ತು. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡಲು ಸೂಕ್ತ ಪ್ರೋತ್ಸಾಹ ನೀಡಬೇಕು. ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಲು ಮಹತ್ವ ನೀಡಿ, ಕ್ರೀಡಾ ಚಟುವಟಿಕೆಗಳಿಗೆ ದೂರ ಇಡುತ್ತೇವೆ. ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏಷಿಯನ್ , ಕಾಮನ್ ವೆಲ್ತ್ ಒಲಂಪಿಕ್ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಮನಸ್ಸು ಉಲ್ಲಾಸವಾಗಿರಬೇಕು ಎಂದರೆ ದಿನನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ನಗರದಲ್ಲಿ ಸಿ.ಎ. ಸೈಟ್ ಪಡೆದು ಸುಸಜ್ಜಿತ ಕಟ್ಟಡ ಕಟ್ಟಿ ನೌಕರರ ಮನೋಲ್ಲಾಸ ಹಾಗೂ ಮನೋರಂಜನೆ ಅವಕಾಶ ನೀಡಬೇಕು. ಸರ್ಕಾರಿ ನೌಕರರ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಯಾವುದೇ ಪಕ್ಷಗಳು ಅಧಿಕಾರ ಹಿಡಿದು ತಮ್ಮ ಪ್ರಣಾಳಿಕೆಯನ್ನು ಜಾರಿಗೆ ತಂದು ಜನರಿಗೆ ಮುಟ್ಟಿಸುವಲ್ಲಿ ನೌಕರರ ಪಾತ್ರ ಹೆಚ್ಚಿನದು. ಜಿ.ಎಸ್.ಟಿ ಸಂಗ್ರಹದಲ್ಲಿ ನಮ್ಮ ರಾಜ್ಯ ದೇಶಕ್ಕೆ ಎರಡನೇ ಸ್ಥಾನದಲ್ಲಿದೆ. ರಾಜ್ಯ ಅಭಿವೃದ್ಧಿ ಹೊಂದುವುದಕ್ಕೆ ಎಲ್ಲಾ ಕಾರಣ ಸರ್ಕಾರಿ ನೌಕರರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೌಕರರ ಪರವಾಗಿ ಹಾಗೂ ಒಳಿತಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಈಗಾಗಲೆ ವೇತನ ಆಯೋಗ ರಚನೆಯನ್ನೂ ಕೂಡ ಮಾಡಿದ್ದಾರೆ.  ಈ ಬಾರಿಯ ಬಜಟ್ ಮಂಡನೆ ನಂತರ ಸರ್ಕಾರಿ ನೌಕರರಲ್ಲಿ ಅಸಮಾಧಾನ ಮಡುಗಟ್ಟಿದೆ. ವೇತನ ಆಯೋಗ ಜಾರಿ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹ ಒಲವು ತೋರಿದ್ದಾರೆ. ಐದಾರು ಶಾಸಕರು ಸೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವೇತನ ಆಯೋಗ ಜಾರಿ ಕುರಿತು ಪ್ರತ್ಯೇಕವಾಗಿ ಸಮಾಲೋಚನೆ ನಡೆಸುವುದಾಗಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ  ಆಶ್ವಾಸನೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಪ್ರತಿ ವರ್ಷ ನೌಕರರಿಗೆ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತದೆ. ಕಾಲೇಜಿನ ಓದುವ ಸಂದರ್ಭದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇವೆ. ಆದರೆ ಸರ್ಕಾರಿ ನೌಕರಿ ಸೇರಿದ ಮೇಲೆ ಇದರಿಂದ ದೂರವಾಗುತ್ತೇವೆ. ನೌಕರರು ಚೈತನ್ಯದಾಯಕವಾಗಿ ಬೆಳಿಗ್ಗಿನ ಕೆಲಸ ಆರಂಭಿಸಬೇಕು. ಇದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಶೇ.1 ರಷ್ಟು ಇರುವ ಸರ್ಕಾರಿ ನೌಕರರು ಶೇ.99 ರಷ್ಟು ಜನರ ಸಮಸ್ಯೆಗಳನ್ನು ಪರಿಹರಿಸಬೇಕು. ಎಲ್ಲಾ ಹಂತದ ಸರ್ಕಾರಿ ಕೆಲಸ ದೊಡ್ಡದು. ಇದರಲ್ಲಿ ಮೇಲು ಹಾಗೂ ಕೀಳು ಎಂಬುದಿಲ್ಲ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಮಾತನಾಡಿ, ಸರ್ಕಾರಿ ನೌಕರರು ಸದಾ ಕಾಲ ದುಡಿಯುತ್ತಾ ಜೀವನದ ಆನಂದ ಸವಿಯದೇ ಬದುಕುತ್ತಾರೆ. ಹೀಗೆ ಮಾಡದೇ ಪ್ರತಿನಿತ್ಯದ ಚಟುವಟಿಕೆಗಳನ್ನು ಆನಂದದಿಂದ ಅನುಭವಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ನಗರ ಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಆರ್ ಕೆ.ಆರ್.ಜಯಲಕ್ಷ್ಮಿಬಾಯಿ, ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘಧ ವಿಶೇಷಾಧಿಕಾರಿ ಆರ್.ಮೋಹನ್ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕೆ.ಟಿ ತಿಮ್ಮಾರೆಡ್ಡಿ, ಜಿಲ್ಲಾ ಖಜಾಂಚಿ ಬಿ.ವೀರೇಶ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಲೋಕೇಶ್, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಆರ್. ಲಕ್ಷ್ಮಯ್ಯ, ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷ ಎಸ್.ಈರಣ್ಣ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಆರ್.ಶಿವಕುಮಾರ್, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಪಿ.ಎಲ್. ಲಿಂಗೇಗೌಡ  ಜಿಲ್ಲಾ ಶಾಖೆಯ ಎಲ್ಲಾ ನಿರ್ದೇಶಕರುಗಳು, ತಾಲ್ಲೂಕು ಶಾಖೆಗಳ ಎಲ್ಲಾ ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳು, ಜಿಲ್ಲೆಯ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!