ಬಳ್ಳಾರಿ: 2023ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಲೇ ಕ್ಷೇತ್ರ ಹುಡುಕಾಟವೂ ಜೋರಾಗಿದೆ. ಅದರಲ್ಲೂ ಈ ಬಾರಿ ಬಳ್ಳಾರಿ ಕ್ಷೇತ್ರ ಸಾಕಷ್ಟು ಗಮನ ಸೆಳೆಯುತ್ತಿದೆ. ಒಂದು ಕಡೆ ಬಿಜೆಪಿ ಗೆಲುವಿಗಾಗಿ ಹಂಬಲಿಸುತ್ತಾ ಇದ್ರೆ ಇನ್ನೊಂದು ಕಡೆ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಇದರಿಂದ ವೋಟ್ ಡಿವೈಡ್ ಆಗುವ ಸಾಧ್ಯತೆಯೂ ಇದೆ. ಇದರ ಜೊತೆಗೆ ಸಹೋದರ, ಆಪ್ತಮಿತ್ರ ನಡುವೆಯೇ ಬಳ್ಳಾರಿ ನೆಲದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ನಡೆಯಲಿದೆ.
ಜಿಲ್ಲೆಯ ಸಂಡೂರು ಕ್ಷೇತ್ರದ ಸದ್ಯ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಭದ್ರ ಕೋಟೆಯನ್ನು ಹೊಡೆದು ಬಿಜೆಪಿ ಕಮಲ ಅರಳಿಸುವ ಪ್ರಯತ್ನ ನಡೆಸುತ್ತಿದೆ. ಹೀಗಾಗಿ ಈ ಬಾರಿ ಶ್ರೀರಾಮುಲು ಅವರನ್ನು ಸಂಡೂರಿನಿಂದಾನೇ ಸ್ಪರ್ಧಿಸಲು ಸೂಚಿಸಲಾಗಿದೆ ಎನ್ನಲಾಗುತ್ತಾ ಇದೆ. ಆದರೆ ಈ ಗೊಂದಲದ ನಡುವೆ ಶ್ರೀರಾಮುಲು ತಾವು ಎಲ್ಲಿ ನಿಲ್ಲುತ್ತೇವೆ ಎಂಬುದನ್ನು ಖಚಿತ ಪಡಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮು, ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು. ಹೀಗಾಗಿ ನಾನು ಅಲ್ಲಿ ಓಡಾಟ ನಡೆಸುತ್ತಿರುವೆ. ಈಗಾಗಲೆರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಬೇಡಿಕೆ ಇದೆ. ಆದ್ರೆ ನಾನು ಬಳ್ಳಾರಿಯಿಂದಾನೇ ಸ್ಪರ್ಧೆ ಮಾಡುತ್ತೇನೆ. ಕಲ್ಯಾಣ ಕರ್ನಾಟಕದ 41 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಬೇಕಿದೆ. ಅದಕ್ಕಾಗಿ ಕೇಂದ್ರ ನಾಯಕರು ಬರುತ್ತಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಹತ್ತು ಬಾರಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಎರಡು ಬಾರಿ ಬೇರೆ ಪಕ್ಷ ಗೆದ್ದಿದೆ. ಈ ಬಾರಿ ಸಂಡೂರಿನಲ್ಲಿ ಬಿಜೆಪಿ ಗೆಲ್ಲಬೇಕಿದೆ ಎಂದಿದ್ದಾರೆ.