Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ ಟಿಕೆಟ್ ಕನ್ಫರ್ಮ್ ಮಾಡದ ಬಿಜೆಪಿ ವಿರುದ್ಧ ಮುನಿಸಿಕೊಂಡರಾ ಶ್ರೀರಾಮುಲು..?

---Advertisement---

ಬೆಂಗಳೂರು: ಚುನಾವಣೆ ಹತ್ತಿರವಿರುವಾಗಲೇ ಸಚಿವ ಶ್ರೀರಾಮುಲು ಬಿಜೆಪಿ ಮೇಲೆ ಮುನಿಸಿಕೊಂಡರಾ ಎಂಬ ಅನುಮಾನ ಶುರುವಾಗಿದೆ. ಈ ಅನುಮಾನ, ಚರ್ಚೆಗೆಲ್ಲಾ ಕಾರಣ, ಸಾರಿಗೆ ಇಲಾಖೆಯ ಸಚಿವರಾಗಿರುವ ಶ್ರೀರಾಮುಲು ತಮ್ಮ ಕ್ಷೇತ್ರದ ಅದರಲ್ಲೂ ಮುಖ್ಯವಾದ ಕಾರ್ಯಕ್ರಮಕ್ಕೆ ಗೈರಾಗಿರುವುದು ಇಷ್ಟೆಲ್ಲಾ ಚರ್ಚೆ, ಅನುಮಾನಕ್ಕೆ ಕಾರಣವಾಗಿದೆ.

ಸಚಿವ ಶ್ರೀರಾಮುಲು ಅವರು ಈ ಮೊದಲು ಆರೋಗ್ಯ ಇಲಾಖೆಯ ಸಚಿವರಾಗಿದ್ದರು. ಕೊರೊನಾ ಸಮಯದಲ್ಲಿ ಸಾರಿಗೆ ಇಲಾಖೆಗೆ ಸಚಿವರನ್ನಾಗಿ ನೇಮಿಸಿದರು. ಆದರೆ ಆ ಇಲಾಖೆ ಶ್ರೀರಾಮುಲುಗೆ ಇಷ್ಟವೇನು ಇರಲಿಲ್ಲ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಮತ್ತೊಮ್ಮೆ ಶ್ರೀರಾಮುಲು ಅವರನ್ನೇ ಕಣಕ್ಕಿಳಿಸಲು ಬಿಜೆಪಿ ನಿರ್ಧಾರ ಮಾಡಿದೆ ಎ‌ನ್ನಲಾಗುತ್ತಿದೆ. ಆದರೆ ಮೊಣಕಾಲ್ಮೂರು ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು ಬಳ್ಳಾರಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಬಿಜೆಪಿ ಮಾತ್ರ ಇನ್ನು ಟಿಕೆಟ್ ಕನ್ಫರ್ಮ್ ಮಾಡಿಲ್ಲ.

ಈ ಎಲ್ಲಾ ಬೆಳವಣಿಗೆಗಳಿಂದ ಶ್ರೀರಾಮುಲು ಮುನಿಸಿಕೊಂಡರಾ ಎಂಬ ಪ್ರಶ್ನೆಗಳು ಎದ್ದಿವೆ. ಕೆಎಸ್ಆರ್ಡಿಸಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ದುಬಾರಿ ಬಸ್ ಖರೀದಿ ಮಾಡಿದೆ. ಈ ಬಸ್ ಉದ್ಘಾಟನೆಗೂ ಶ್ರೀರಾಮುಲು ಬಂದಿರಲಿಲ್ಲ. ಈ ಮೂಲಕ ಬಿಜೆಪಿ ಮೇಲೆ ರಾಮುಲು ಮುನಿಸಿಕೊಂಡರಾ ಎಂಬ ಚರ್ಚೆಗಳು ಹರಿದಾಡುತ್ತಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...