ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಫೆ.28) : ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 9 ರಿಂದ 11 ರವರೆಗೆ ಜರುಗಲಿರುವ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲು ಕ್ರಮಕೈಗೊಳ್ಳಲಾಗಿದೆ.
ವಿಶೇಷ ವಾಹನಗಳ ಕಾರ್ಯಾಚರಣೆ ಮಾರ್ಗ ಇಂತಿದೆ. ಚಿತ್ರದುರ್ಗ-ನಾಯಕನಹಟ್ಟಿ ವಯಾ ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ. ಚಳ್ಳಕೆರೆ-ನಾಯಕನಹಟ್ಟಿ ವಯಾ ನೇರ್ಲಗುಂಟೆ. ಹಿರಿಯೂರು-ನಾಯಕನಹಟ್ಟಿ ವಯಾ ಸಾಣಿಕೆರೆ, ಚಳ್ಳಕೆರೆ, ನೇರ್ಲಗುಂಟೆ. ನಾಯಕನಹಟ್ಟಿ-ಪರಶುರಾಂಪುರ ವಯಾ ಚಳ್ಳಕೆರೆ ಮಾರ್ಗದಲ್ಲಿ ಸಂಚರಿಸಲಿವೆ.
ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನ ಕಾರ್ಯಾಚರಣೆ ಮಾಡಲಾಗುವುದು. ಭಕ್ತಾಧಿಗಳು ವಿಶೇಷ ವಾಹನಗಳ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಳ್ಳಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.