ಬೆಂಗಳೂರು: ಸರ್ಕಾರಿ ನೌಕರರು ಏಳನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದ್ದರು. ಕಡೆಗೂ ಸರ್ಕಾರ ಅವರ ಬೇಡಿಕೆಗೆ ಮಣಿದಿದ್ದು, ವೇತನ ಹೆಚ್ಚಳ ಮಾಡಿದೆ ಏಪ್ರಿಲ್ 1ರಿಂದಾನೇ ವೇತನ ಹೆಚ್ಚಳ ಜಾರಿಗೆ ಬರುವಂತೆ ಅಧಿಕೃತ ಆದೇಶ ಹೊರಡಿಸಿದೆ.
ಏಪ್ರಿಲ್ ನಿಂದ ಹೊಸ ಆದೇಶ ಜಾರಿಗೆ ಬರಲಿದೆ. ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ.