ಬೆಂಗಳೂರು: ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಅಧಿಕಾರಿಗಳು ಈ ಪ್ರತಿಭಟನೆಗೆ ಸರ್ಕಾರವೂ ಮಣಿದು ಅವರ ಬೇಡಿಕೆಗೆ ಅಸ್ತು ಎಂದಿದೆ. ಆದ್ರೆ ಇದರಿಂದ ಸರ್ಕಾರಕ್ಕೆ ಹೊರೆಯಾಗುವುದು ಸುಮಾರು 900 ಕೋಟಿಯಷ್ಡು.
ಈ ಮುಂಚೆ ಮಾಜಿ ಸಿಎಂ ಯಡಿಯೂರಪ್ಪ ಅವರು ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಭರವಸೆ ನೀಡಿದ್ದರು. ಆದ್ರೆ ಸಿಎಂ ಬೊಮ್ಮಾಯಿ ಅವರು ತಮ್ಮ ಈ ಬಾರಿಯ ಬಜೆಟ್ ಮಂಡನೆ ಮಾಡುವಾಗ ಏಳನೇ ವೇತನ ಆಯೋಗದ ಬಗ್ಗೆ ಯಾವುದೇ ಭರವಸೆ ನೀಡಿರಲಿಲ್ಲ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಇಂದು ಬೀದಿಗಿಳಿದು ಹೋರಾಟ ಮಾಡಿದರು.
ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ದೃಢವಾಗಿ ತಿಳಿಸಿದ್ದರು. ಸಭೆಗಳನ್ನು ಮಾಡಿ ಸಮಾಧಾನ ಮಾಡುವಲ್ಲಿ ವಿಫಲವಾಗಿದ್ದರು. ಕಡೆಗೂ ಸಿಎಂ ಬೊಮ್ಮಾಯಿ ಮಣಿದು, ವೇತನ ಆಯೋಗ ಜಾರಿಗೆ ಒಪ್ಪಿಗೆ ಸೂಚಿಸಿದ್ದಾರೆ.