ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಇತ್ತಿಚೆಗಷ್ಟೇ ಎಎಪಿ ಪಕ್ಷವನ್ನು ಸೇರ್ಪಡೆಯಾಗಿ, ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದ್ರೆ ಅದ್ಯಾಕೋ ಇತ್ತಿಚೆಗೆ ಇದ್ದಕ್ಕಿದ್ದ ಹಾಗೆ ಬಿಜೆಪಿ ಸೇರಿದ್ದಾರೆ. ಇಂದು ಪ್ರಧಾನ ಕಾರ್ಯದರ್ಶಿ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ.
ಭಾಸ್ಕರ್ ರಾವ್ ಜೊತೆ ಅವರ ಬೆಂಬಲಿಗರು ಕೂಡ ಬಿಜೆಪಿಗೆ ಸೇರಿದ್ದಾರೆ. ಭಾಸ್ಕರ್ ರಾವ್ ಅವರಿಗೆ ಪಕ್ಷದ ಶಾಲು ಹೊದಿಸಿ, ಧತವಜ ನೀಡಿ ಪಕ್ಷಕ್ಕೆ ಆಹ್ವಾನ ಮಾಡಿಕೊಂಡರು. ಭಾಸ್ಕರ್ ರಾವ್ ಕೂಡ ಖುಷಿ ಖುಷಿಯಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಳಿಕ ಮಾತನಾಡಿದ ಭಾಸ್ಕರ್ ರಾವ್, ಎಎಪಿ ಕರ್ನಾಟಕದಲ್ಲಿ ಬೆಳೆಯುತ್ತಿಲ್ಲ. ಅವರ ಕಾರ್ಯವೈಖರಿ ಶೈಲಿಯಿಂದ ಸಾಧ್ಯವಾಗುತ್ತಿಲ್ಲ. ಸನಾತನ ಧರ್ಮ, ರಾಷ್ಟ್ರೀಯತೆಯನ್ನು ಆಳವಾಗಿ ಮೈಗೂಡಿಸಿಕೊಂಡಿರುವ ಬಿಜೆಪಿಗೆ ಈಗ ನಾನು ಸೇರಿದ್ದೇನೆ. ಬಾಲ್ಯದಿಂದಾನು ಸನಾತನ ಧರ್ಮ ಹಾಗೂ ರಾಷ್ಟ್ರೀಯತೆಗೆ ನಾನು ಬದ್ಧವಾಗಿದ್ದೇನೆ ಎಂದಿದ್ದಾರೆ.
ಸನಾತನ ಧರ್ಮ, ರಾಷ್ಟ್ರೀಯತೆಯ ಮೇಲೆ ನನಗೆ ಅಪಾರ ಪ್ರೀತಿ ಇದೆ. ನಾನು ಸನಾತನ ಪಕ್ಷಕ್ಕೆ ಸೇರ್ಪಡೆಯಾಗಿರುವುದೇ ನನಗೆ ಖುಷಿಯಾಗಿದೆ. ಎಲ್ಲಿ ನನ್ನ ಅವಶ್ಯಕತೆ ಇದೆ, ಅಲ್ಲಿ ನಾನು ನನ್ನ ತೊಡಗಿಸಿಕೊಂಡು ಕೆಲಸ ಮಾಡುತ್ತೇನೆ ಎಂದಿದ್ದಾರೆ.