ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮಾ.04) : ಜಿಲ್ಲೆಯಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸುವುದರ ಜೊತೆಗೆ ಸರ್ಕಾರದ ಯೋಜನೆಗಳನ್ನು ತಿಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ನಗರದ ಮುರುಘಾರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಶನಿವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದ ರೈತರು ಸಶಕ್ತವಾಗುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಒಟ್ಟು 10 ಸಾವಿರ ರೂ. ಗಳನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ರೈತರಿಗೆ ಕೊಡಲಾಗುತ್ತಿದೆ.
ರೈತರ ಮಕ್ಕಳಿಗೆ ಮುಖ್ಯಮಂತ್ರಿ ರೈತವಿದ್ಯಾನಿಧಿ ಮೂಲಕ ಕಳೆದ ವರ್ಷ ರಾಜ್ಯದಲ್ಲಿ 10 ಲಕ್ಷ ಮಕ್ಕಳಿಗೆ ರೂ.686 ಕೋಟಿ ನೀಡಿದೆ. ರೈತವಿದ್ಯಾನಿಧಿ ಯೋಜನೆಯನ್ನು ಕೃಷಿ ಕಾರ್ಮಿಕರ ಮಕ್ಕಳಿಗೆ ವಿಸ್ತರಣೆ ಮಾಡಿ, 46 ಸಾವಿರ ಮಕ್ಕಳಿಗೆ ರೂ.14 ಕೋಟಿ ನೀಡಿದೆ. ರೈತ ಶಕ್ತಿ ಯೋಜನೆ ಜಾರಿ ಸೇರಿದಂತೆ ರಾಜ್ಯದ ರೈತರ ಕಣ್ಣೀರು ಒರೆಸುವ ಕೆಲಸ ರಾಜ್ಯ ಸರ್ಕಾರ ಮಾಡಿದೆ ಎಂದರು.