ಬಳ್ಳಾರಿ,(ಮಾ.04): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಜಿಲ್ಲೆಯಲ್ಲಿ ಮಾ.9ರಿಂದ ಮಾ.29ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ಬಳ್ಳಾರಿ ಜಿಲ್ಲೆಯ ಬಳ್ಳಾರಿ ನಗರ-10, ಸಿರುಗುಪ್ಪ-2, ಸಂಡೂರು-2, ಕಂಪ್ಲಿ-1 ಮತ್ತು ಕುರುಗೋಡು-1 ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಸುಗಮವಾಗಿ ಪರೀಕ್ಷೆಗಳು ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದೂ ಘೋಷಿಸಿ ಜಿಲ್ಲಾ ದಂಡಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚುವಂತೆ ಮತ್ತು ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿ ಆದೇಶಿಸಿದ್ದಾರೆ.