ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮಾ.06) : ನಮ್ಮ ನಾಡು ರೈತರ ನಾಡಾಗಿದ್ದು, ರೈತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ಆಸಕ್ತಿ ಮತ್ತು ಇಚ್ಚಾಶಕ್ತಿಯಿಂದ ಕಾರ್ಯನಿರ್ವಹಿಸುವ ಪರಿಪಾಠ ರೂಢಿಸಿಕೊಳ್ಳಬೇಕು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಕೇವಲ ಸಮಯ, ಸಂಬಳಕ್ಕೆ ಕೆಲಸ ಮಾಡುವುದು ಅಲ್ಲ, ಸರ್ಕಾರಿ ಸೇವೆ ಮಾಡಲು ದೊರಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಆತ್ಮತೃಪ್ತಿಗಾಗಿಯಾದರೂ ಉತ್ತಮವಾಗಿ ಕೆಲಸ ಮಾಡಬೇಕು. ಎಂದು ಸಚಿವರು ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಭೆಯಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಪೂರ್ಣಿಮಾ ಕೆ.ಶ್ರೀನಿವಾಸ್, ಟಿ.ರಘುಮೂರ್ತಿ, ಗೂಳಿಹಟ್ಟಿ ಡಿ.ಶೇಖರ್, ಎಂ.ಚಂದ್ರಪ್ಪ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ಚಂದ್ರಯ್ಯ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.