Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜಾಮೀನು ಸಿಕ್ಕ ಕೂಡಲೇ ಫುಲ್ ಜೋಶ್ : ಅಡಿಕೆ ತೋಟ, ಕ್ರಷರ್ ನಿಂದ ಬಂದ ಹಣವೆಂದ ವಿರೂಪಾಕ್ಷಪ್ಪ..!

---Advertisement---

 

ದಾವಣಗೆರೆ: ಮಾಡಾಳು ಪ್ರಶಾಂತ್ ಲಂಚ ಪ್ರಕರಣದಲ್ಲಿ ಜೈಲು ಸೇರಿದ್ದು, ಶಾಸಕ ಮಾಡಾಳು ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದರು. ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಎಲ್ಲರ ಮುಂದೆ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಹಾರ ಹಾಕಿಕೊಮಡು, ವಾದ್ಯಗಳೊಂದಿಗೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

ಮಹದೇವಮ್ಮ ದೇವಿ ದರ್ಶನ ಪಡೆದು, ಈಶ್ವರನ ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ವಿರೂಪಾಕ್ಷಪ್ಪ, ಈ ರೀತಿಯ ಆರೋಪ ಬಂದಿದ್ದರಿಂದ ನಾನು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಹಾಗಂತ ಎಲ್ಲಿಯೂ ಓಡಿ ಹೋಗಿರಲಿಲ್ಲ‌. ಊರಿನಲ್ಲಿಯೇ ಇದ್ದೆ. ಅಡಿಕೆ ತೋಟ, ಕ್ರಷರ್ ನಿಂದ ಬಂದ ಹಣವನ್ನು ಮನೆಯಲ್ಲಿಟ್ಟಿದ್ದೆವು. ಅದು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿದೆ ಎಂದು ಸಮರ್ಥನೆ ನೀಡಿದ್ದಾರೆ.

ಆ ಹಣಕ್ಕೆ ನಮ್ಮ ಬಳಿ ದಾಖಲೆಯಿದೆ. KSDL ಅಧ್ಯಕ್ಷನಾಗಿ ನಾನು ನಿಯಮಬಾಹಿರವಾಗಿ ನಾನು ನಡೆದುಕೊಂಡಿಲ್ಲ. ಪಕ್ಷ ತಾಯಿಯಿದ್ದಂತೆ, ಪಕ್ಷಕ್ಕೆ ಎಂದೂ ದ್ರೋಹ ಮಾಡಿಲ್ಲ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. 48 ಗಂಟೆಯೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...