Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಣೆ

---Advertisement---

ವರದಿ ಮತ್ತು ಫೋಟೋ ಕೃಪೆ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮಾ.08) : ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್‍ಗಳನ್ನು ನಗರದ 12 ನೇ ವಾರ್ಡ್‍ನಲ್ಲಿ ಮಹಿಳೆಯರಿಗೆ ವಿತರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಗ್ಯಾರೆಂಟಿ ಕಾರ್ಡ್‍ಗಳನ್ನು ವಿತರಿಸಿ ಮಾತನಾಡುತ್ತ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗುವುದು. ಅಡುಗೆ ಅನಿಲದ ಬೆಲೆ ಏರಿಕೆಯಾಗಿರುವುದರಿಂದ ಗ್ಯಾಸ್ ಸಿಲಿಂಡರ್ ಗೆ ಐದು ನೂರು ಪರಿಹಾರ.

ಜಿ.ಎಸ್.ಟಿ.ಪರಿಹಾರಕ್ಕೆ ಐದು ನೂರು ರೂ. ಹಾಗೂ ಬೆಲೆ ಏರಿಕೆಗಾಗಿ ಒಂದು ಸಾವಿರ ರೂ.ಗಳು ಸೇರಿದಂತೆ ಗೃಹಲಕ್ಷ್ಮಿ ಕುಟುಂಬದ ಪ್ರತಿ ಮಹಿಳೆಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ಉಚಿತವಾಗಿ ನೀಡಲಾಗುವುದು. ಸದೃಢ ಹಾಗೂ ಸುರಕ್ಷಿತ ಕುಟುಂಬಕ್ಕಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತರುವಂತೆ ವಿನಂತಿಸಿದರು.

ಕಾಂಗ್ರೆಸ್ ಹನ್ನೆರಡನೆ ವಾರ್ಡ್ ಅಧ್ಯಕ್ಷೆ ಮುನಿರಾ ಎ.ಮಕಾಂದಾರ್ ಮಹಿಳೆಯರಿಗೆ ಅರಿಶಿನ-ಕುಂಕುಮ, ಜಾಕೀಟ್ ಬಟ್ಟೆಗಳೊಂದಿಗೆ ಗ್ಯಾರೆಂಟಿ ಕಾರ್ಡ್‍ಗಳನ್ನು ವಿತರಿಸುವ ಮೂಲಕ ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಿ ಮಾತನಾಡುತ್ತ ಎಲ್ಲಾ ಜಾತಿ ಧರ್ಮದ ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದಲ್ಲಿ ಶಾಂತಿ ನೆಲೆಸಲು ಸಾಧ್ಯ. ಕೋಮುವಾದಿ ಬಿಜೆಪಿ.ಯವರು ಕಾಂಗ್ರೆಸ್ ನೀಡಿರುವ ಅನ್ನ ಕಸಿಯಲು ಹೊರಟಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನು ಕಿತ್ತೊಗೆಯಬೇಕಾಗಿರುವುದಿಂದ ಎಲ್ಲರೂ ಕಾಂಗ್ರೆಸ್‍ಗೆ ಮತ ನೀಡುವಂತೆ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಸೈಯದ್ ವಲಿಖಾದ್ರಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಕ್ಷರುದ್ರಸ್ವಾಮಿ, ಹೆಚ್.ಶಬ್ಬೀರ್‍ಭಾಷ, ಅಲ್ಲಾಭಕ್ಷಿ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...