Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಕ್ಷಣಗಣನೆ ಆರಂಭ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾ.09) : ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಮಾರ್ಚ್10 ರಂದು ಶುಕ್ರವಾರ ನಡೆಯಲಿದ್ದು, ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಹಟ್ಟಿ ತಿಪ್ಪೇಶನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.

ಮಧ್ಯಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಜಾತ್ರೆಗೆ ನಾಡಿನ ಹಲವು ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತಾಧಿಕಾರಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ. ಜಾತ್ರೆ ಪ್ರಯುಕ್ತ ನಾಯಕನಹಟ್ಟಿ ಪಟ್ಟಣ ನೂತನ ವಧುವಿನಂತೆ ಸಿಂಗಾರಗೊಂಡಿದೆ.

ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ ಮತ್ತು ಹೊರಮಠದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಎರಡೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಗಿದೆ. ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಜತೆಗೆ ಕುಡಿಯುವ ನೀರಿಗೆ ವಿಶೇಷವಾದ ವ್ಯವಸ್ಥೆ ರೂಪಿಸಲಾಗಿದೆ.

ಮೂಲ ಸೌಕರ್ಯದ ವ್ಯವಸ್ಥೆ: ನಾಯಕನಹಟ್ಟಿ ಪಟ್ಟಣದ ಎಲ್ಲ ವಾರ್ಡ್‍ಗಳಲ್ಲೂ ರಸ್ತೆ, ಚರಂಡಿ ಸ್ವಚ್ಛಗೊಳಿಸಲಾಗಿದೆ. ಅನಾವಶ್ಯಕ ಮುಳ್ಳುಗಳ ಗಿಡ ತೆರವುಗೊಳಿಸಲಾಗಿದೆ.  ಪಟ್ಟಣದ ಎಲ್ಲ ವಾರ್ಡ್‍ಗಳಿಗೆ ನಿರಂತರವಾಗಿ ನೀರು ಸರಬರಾಜು, ಬೀದಿದೀಪ, ಹೈಮಾಸ್ಟ್ ದೀಪಗಳ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಪಟ್ಟಣದ ಹಲವು ಕಡೆಗಳಲ್ಲಿ ಶೌಚಾಲಯ ವ್ಯವಸ್ಥೆ,  ಬಳಸಲು ನೀರಿನ ತೊಟ್ಟಿಗಳು, ಕೊಳವೆ ಬಾವಿಗಳಿಂದ ನಿರಂತರವಾಗಿ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ವ್ಯವಸ್ಥೆ, ಚರಂಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಫಿನಾಯಿಲ್, ಸೊಳ್ಳೆಗಳ ನಿಯಂತ್ರಣಕ್ಕೆ ಧೂಮೀಕರಣ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ. ಜಾತ್ರೆಗೆ ಬರುವ ಭಕ್ತರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಬ್ಯಾನರ್‍ಗಳ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಿಂದ ಕೈಗೊಳ್ಳಲಾಗಿದೆ.

ಸುಗಮ ಸಂಚಾರಕ್ಕೆ ವ್ಯವಸ್ಥೆ:
ಜಾತ್ರೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಪಟ್ಟಣದ 3 ಕಡೆಗಳಲ್ಲಿ ಬಸ್‍ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ದಾವಣಗೆರೆ-ಜಗಳೂರು- ಹೊಸಪೇಟೆ ಕಡೆಯಿಂದ ಬರುವ ವಾಹನಗಳಿಗೆ ಪಟ್ಟಣದ ಗಂಗಯ್ಯನಹಟ್ಟಿ ಬಳಿ, ಬಳ್ಳಾರಿ-ಅನಂತಪುರ- ರಾಯದುರ್ಗ- ಕಲ್ಯಾಣದುರ್ಗ ಕಡೆಯಿಂದ ಬರುವ ವಾಹನಗಳಿಗೆ ತಳಕು ರಸ್ತೆಯ ಮದರಾಸದ ಬಳಿ, ಬೆಂಗಳೂರು- ತುಮಕೂರು- ಚಳ್ಳಕೆರೆ- ಚಿತ್ರದುರ್ಗ ಮಾರ್ಗದಿಂದ ಬರುವವರಿಗೆ ಮನುಮೈನಹಟ್ಟಿ ಏಕಾಂತೇಶ್ವರ ದೇವಾಲಯದ ಬಳಿ ಬಸ್‍ನಿಲ್ದಾಣಗಳನ್ನು ತೆರೆಯಲಾಗಿದೆ. ಜತೆಗೆ ದೇವಾಲಯದ ಬಳಿ ತೆರಳಲು ಆಟೋರಿಕ್ಷಾಗಳ ವ್ಯವಸ್ಥೆ ಮಾಡಲಾಗಿದೆ.

200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ:‌ ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 9 ರಿಂದ 11 ರವರೆಗೆ ಜರುಗಲಿರುವ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲು ಕ್ರಮಕೈಗೊಳ್ಳಲಾಗಿದೆ.
ವಿಶೇಷ ವಾಹನಗಳ ಕಾರ್ಯಾಚರಣೆ ಮಾರ್ಗ ಇಂತಿದೆ. ಚಿತ್ರದುರ್ಗ-ನಾಯಕನಹಟ್ಟಿ ವಯಾ ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ. ಚಳ್ಳಕೆರೆ-ನಾಯಕನಹಟ್ಟಿ ವಯಾ ನೇರ್ಲಗುಂಟೆ. ಹಿರಿಯೂರು-ನಾಯಕನಹಟ್ಟಿ ವಯಾ ಸಾಣಿಕೆರೆ, ಚಳ್ಳಕೆರೆ, ನೇರ್ಲಗುಂಟೆ. ನಾಯಕನಹಟ್ಟಿ-ಪರಶುರಾಂಪುರ ವಯಾ ಚಳ್ಳಕೆರೆ ಮಾರ್ಗದಲ್ಲಿ ಸಂಚರಿಸಲಿವೆ.  ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನ ಕಾರ್ಯಾಚರಣೆ ಮಾಡಲಾಗುವುದು. ಭಕ್ತಾಧಿಗಳು ವಿಶೇಷ ವಾಹನಗಳ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಳ್ಳಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಪ್ರಾಣಿ ಬಲಿ ನಿಷೇಧ: ಮಾರ್ಚ್ 10 ರಂದು ಜರುಗುವ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿ ಬಲಿಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

ಜಾತ್ರೆಯಲ್ಲಿ ಪ್ರಾಣಿಬಲಿ ನಡೆಯುವುದು ಕಂಡುಬಂದರೆ ಸಾರ್ವಜನಿಕರು, ಚಿತ್ರದುರ್ಗ ಪೊಲೀಸ್ ಅಧೀಕ್ಷಕರ ದೂರವಾಣಿ ಸಂಖ್ಯೆ : 08194-222781, 9480803101,  ಚಳ್ಳಕೆರೆ ಪೊಲೀಸ್ ಉಪ ಅಧೀಕ್ಷಕ ದೂರವಾಣಿ ಸಂಖ್ಯೆ 08195-251010, 9480803121, ಚಳ್ಳಕೆರೆ ಪೊಲೀಸ್ ವೃತ್ತ ನಿರೀಕ್ಷಕರ ದೂರವಾಣಿ ಸಂಖ್ಯೆ 08195-222019, 9480803132, ನಾಯಕನಹಟ್ಟಿ ಆರಕ್ಷಕ ಉಪ ನಿರೀಕ್ಷಕರ ದೂರವಾಣಿ ಸಂಖ್ಯೆ 08190-207408,9480803158 ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ

ರಥದ ಸಿದ್ಧತೆ ಪೂರ್ಣ: ಜಾತ್ರೆಯ ಕೇಂದ್ರ ಬಿಂದು ದೊಡ್ಡ ರಥವಾಗಿದ್ದು, ಸುಮಾರು 80ಟನ್ ತೂಕವಿರುವ ಹಾಗೂ ಸುಮಾರು 75 ಅಡಿ ಎತ್ತರವಿರುವ ರಥವು 5 ಚಕ್ರಗಳನ್ನು ಹೊಂದಿದೆ. ರಥಕ್ಕೆ ಕಳೆದ ಎರಡು ದಿನಗಳಿಂದ ಬಣ್ಣಬಣ್ಣದ ಬಾವುಟಗಳನ್ನು ಅಳವಡಿಸುವ ಕಾರ್ಯ ಕೈಗೊಳ್ಳಲಾಗಿದೆ. ಗೊಂಬೆಗಳು ಐತಿಹಾಸಿಕ ಘಟನೆಗಳ ಬಿಂಬಿಸುವ ಚಿತ್ರಪಟಗಳ ಅಳವಡಿಸಲಾಗಿದೆ. ಮತ್ತು ರಥವನ್ನು ಎಳೆಯುವ 2ಅಡಿ ಸುತ್ತಳತೆ ಇರುವ ನೂತನ ಮಿಣಿ(ಹಗ್ಗ)ಯನ್ನು ಪರೀಕ್ಷಿಸಲಾಗಿದೆ. ಆ ಮೂಲಕ ಜಾತ್ರೆಗೆ ರಥವನ್ನು ಎಲ್ಲಾ ಹಂತದಲ್ಲೂ ಸಿದ್ಧಗೊಳಿಸಲಾಗಿದೆ.

ನಾಯಕನಹಟ್ಟಿ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಯಾವುದೇ ತರಹದ ಕುಂದುಕೊರತೆ ಉಂಟಾಗದಂತೆ ಅಗತ್ಯವಾದ ಎಲ್ಲಾ ಸಿದ್ಧತೆಯನ್ನು ಜಿಲ್ಲಾಡಳಿತ ಕೈಗೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!