ಮೈಸೂರು: ನಿನ್ನೆ ಸಂಜೆ ಧ್ರುವ ನಾರಾಯಣ್ ಅವರ ಅಂತಿಮ ದರ್ಶನ ಪಡೆದು ಮನೆಗೆ ತೆರಳಿದ್ದ ಶಾಸಕ ಎನ್ ಮಹೇಶ್ ಗೆ ಇದ್ದಕ್ಕಿದ್ದ ಹಾಗೇ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ.
ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಚೇತರಿಸಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಎನ್ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿನ್ನೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಎನ್ನ ಮಹೇಶ್, ಧ್ರುವ ನಾರಾಯಣ್ ಅವರ ಅಂತಿಮ ದರ್ಶನ ಪಡೆದು ಮೈಸೂರಿಗೆ ವಾಪಾಸ್ ಆಗಿದ್ದರು. ರಾತ್ರಿ ಮಾಮೂಲಿಯಂತೆ ಊಟವೆಲ್ಲಾ ಮುಗಿಸಿ, ಮಲಗುವ ವೇಳೆ ಎದೆ ನೋವು ಕಾಣಿಸಿಕೊಂಡಿದೆ.