Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು: ಹೆಚ್ ಡಿ ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ ಎಂದು ಟ್ವಿಟರ್ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ. ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್‌ ಅವರಿಗೆ ಹೇಳಿದ್ದರಂತೆ, ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ; ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು.

ಜನವರಿ 9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳ ಕಾಲ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ʼಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆʼ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ.

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ಹೆಚ್.ಡಿ.ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ಧರಾಮಯ್ಯ ಅವರನ್ನು ಕೆಣಕಿದ್ದಕ್ಕೆ ಜನ ತಕ್ಕ ಉತ್ತರ : ಮಾಜಿ ಸಚಿವ ಎಚ್.ಆಂಜನೇಯ

  ಸುದ್ದಿಒನ್, ಚಿತ್ರದುರ್ಗ, ನ. 23 : ಸಿದ್ದರಾಮಯ್ಯ ನಾಡು ಕಂಡ ಅಪರೂಪದ ನಾಯಕ, 40 ವರ್ಷ ನಿಷ್ಕಳಂಕ ರಾಜಕಾರಣ ಮಾಡಿದ ಮುತ್ಸದ್ಧಿ. ಆದರೆ, ಅವರ ಹೆಸರಿಗೆ ಕಳಂಕ ತರಲು ಅನಗತ್ಯವಾಗಿ ಮುಡಾ ವಿಷಯ

ಬಿಜೆಪಿಗೆ ಹೀನಾಯ ಸೋಲು : ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸೋಲು

ಸುದ್ದಿಒನ್, ಬೆಂಗಳೂರು, ನವೆಂಬರ್.23 : ಕರ್ನಾಟಕದಲ್ಲಿ ನಡೆದ ಎಲ್ಲಾ ಮೂರು ವಿಧಾನಸಭಾ ಉಪಚುನಾವಣೆಗಳಾದ ಶಿಗ್ಗಾಂವ್, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಬ್ಬರು ಬಿಜೆಪಿ ಅಭ್ಯರ್ಥಿಗಳು ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮತದಾರ

ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್ 26 ರಂದು ಪ್ರತಿಭಟನೆ : ಜೆ.ಯಾದವರೆಡ್ಡಿ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಸಂಯಕ್ತ ಹೋರಾಟ-ಕರ್ನಾಟಕ ವತಿಯಿಂದ ನ.26 ರಂದು ಜಿಲ್ಲಾಧಿಕಾರಿ

error: Content is protected !!