Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ : ಡಿ.ದುರುಗೇಶ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ,(ಮಾ.24) :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಯನ್ನು ನಡೆಸಲಿ ಅವರನ್ನು ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ಅಭಿಮಾನಿ ಬಳಗ ತಿಳಿಸಿದೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ, ಒಕ್ಕೂಟದ ಡಿ.ದುರುಗೇಶ್ ಸಿದ್ದರಾಮಯ್ಯನವರು ಜಾತ್ಯಾತೀತ ನಾಯಕರಾಗಿದ್ದಾರೆ ಅವರನ್ನು ಎಲ್ಲಾ ವರ್ಗದದವರು ಸಹಾ ಆಧರಿಸುತ್ತಾರೆ ಅವರನ್ನು ಯಾರು ಸಹಾ ಅಲ್ಲಗೆಳೆಯುವುದಿಲ್ಲ, ಇತಂಹ ನಾಯಕರಿಗೆ ಸ್ಪರ್ಧೆ ಮಾಡಲು ಜಾಗ ಇಲ್ಲ ಎನ್ನವುದು ಸರಿಯಲ್ಲ ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಅವರು ಸ್ಪರ್ದೆ ಮಾಡಿದರೆ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ನೀಡಲಾಗುವುದು ಎಂದರು.

ರಾಜ್ಯದ ಮುಖ್ಯಮಂತ್ರಿಗಳಾಗಿದ್ಧಾಗ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಹೆಚ್ಚಿನ ರೀತಿಯಲ್ಲಿ ಸಹಾಯವನ್ನು ಮಾಡಿದ್ದಾರೆ. ಚಿತ್ರದುರ್ಗದಲ್ಲಿಯೂ ಈ ವರ್ಗದ ಜನತೆ ಹೆಚ್ಚಾಗಿದ್ದಾರೆ ಇದರಿಂದ ಅವರು ಇಲ್ಲಿ ಸ್ಪರ್ಧೆ ಮಾಡಿದರೆ ಗೆಲುವು ಖಂಡಿತ, ಪಕ್ಷದ ವರಿಷ್ಠರು ಸಹಾ ಇದರ ಬಗ್ಗೆ ಆಲೋಚನೆ ಮಾಡಿ ಸಿದ್ದರಾಮಯ್ಯನವರಿಗೆ ಚಿತ್ರದುರ್ಗದಲ್ಲಿ ಸ್ಫರ್ಧೆ ಮಾಡಲು ಅವಕಾಶವನ್ನು ನೀಡಬೇಕೆಂದು ಪಕ್ಷದ ವರಿಷ್ಠರಲ್ಲಿ ದುರುಗೇಶಪ್ಪ ಮನವಿ ಮಾಡಿದರು.

ಬಿ.ಟಿ.ಜಗದೀಶ್ ಮಾತನಾಡಿ, ಸಿದ್ದರಾಮಯ್ಯ ನವರು ರಾಜ್ಯದ 224 ಕ್ಷೇತ್ರಗಳಲ್ಲಿಯೂ ತಮ್ಮ ವರ್ಚಸ್ಸನ್ನು ಹೊಂದಿದ್ದಾರೆ. ಎಲ್ಲಿ ಬೇಕಾದರೂ ನಿಲ್ಲಬಹುದಾಗಿದೆ. ಚುಣಾವಣೆಯ ಸಮಯದಲ್ಲಿ ರಾಜಕೀಯ ಪಕ್ಷದವರು ಬೇರೆಯವರ ಮೇಲೆ ಕೆಸರನ್ನು ಎರೆಚಾಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಇವರ ಬಗ್ಗೆ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಇಂದು ಖಂಡನೀಯ. ಸಿದ್ದರಾಮಯ್ಯ ಒಬ್ಬ ಸಮರ್ಥ ನಾಯಕರಾಗಿದ್ದಾರೆ.

ವಿಧಾನಸಭೆಯಲ್ಲಿ ಇವರು ಇಲ್ಲದಿದ್ದರೆ ಸಭೆ ಕಳೆ ಇರುವುದಿಲ್ಲ, ಎಲ್ಲಾ ಕ್ಷೇತ್ರಗಳಲ್ಲಿಯೂ ಸಹಾ ಸಿದ್ದರಾಮಯ್ಯ ನವರ ಅಭೀಮಾನಿಗಳು ಇದ್ದಾರೆ. ಚಿತ್ರದುರ್ಗದಲ್ಲಿ ಅವರು ಸ್ಪರ್ದೆ ಮಾಡಿದರೆ ಎಲ್ಲರು ಒಟ್ಟಾಗಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ಸಾಧಿಸುವಂತೆ ನೋಡಿಕೊಳ್ಳಲಾಗುವುದು ಎಂದರು.

ಕೂರಚ ಸಮಾಜದ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿ,  ಸಿದ್ದರಾಮಯ್ಯ ನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸ್ಫರ್ದೆ ಮಾಡಿದರೆ ನಮ್ಮ ಅದೃಷ್ಟ, ಅವರು ಅದಿಕಾರದ ಅವಧಿಯಲ್ಲಿ ಮಾಡಿದ ಕೆಲಸವನ್ನು ಈಗಿನ ಬಿಜೆಪಿ ಸರ್ಕಾರ ಮಾಡಿಲ್ಲ, ಚಿತ್ರದುರ್ಗಕ್ಕೆ ಬಂದರೆ ಅವರನ್ನು ಗೆಲ್ಲಿಸಿಕಳುಹಿಸುತ್ತೇವೆ ಎಂದರು.
ಗೋಷ್ಟಿಯಲ್ಲಿ ಕುರುಬ ಸಮಾಜದ ಅಧ್ಯಕ್ಷ ಶ್ರೀರಾಮ್, ಈಡಿಗ ಸಮಾಜದ ಸ್ವಾಮಿ, ನಗರಸಭೆಯ ಮಾಜಿ ಅಧ್ಯಕ್ಷ ಮಂಜಪ್ಪ, ಮಾಲೇಶ್, ಛಲವಾದಿ ಸಮಾಜದ ರವಿ ಪೂಜಾರ್ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!