ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ: ಸಿಎಂ

suddionenews
1 Min Read

ಬೆಂಗಳೂರು: ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್ ಪ್ಲಾಂಟ್ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಸೇರಿದಂತೆ ಇಡೀ ಕರ್ನಾಟಕದ ಮೂಲೆ ಮೂಲೆಯಲ್ಲಿರುವ ನಾಗರಿಕರಿಗೆ ಈ ಸಂಸ್ಥೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದೆ.

ಎಸ್ ಸಿ/ ಎಸ್ ಟಿ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಬಡ ರೋಗಿಗಳಿಗೆ ಈ ಆಸ್ಪತ್ರೆಯಲ್ಲಿ ಉಚಿತ ಅಂಗಾಂಗ ಕಸಿ ಚಿಕಿತ್ಸೆ ದೊರೆಯಲಿದೆ. ಶಾಶ್ವತವಾದ ಆರೋಗ್ಯ ಕರ್ನಾಟಕವನ್ನು ನಿರ್ಮಿಸಲು ಆರೋಗ್ಯ ಕ್ಷೇತ್ರದ ಮುನ್ನೋಟವನ್ನು ರಾಜ್ಯದ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಿದ್ಧಪಡಿಸಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್ ಪ್ಲಾಂಟ್ ನಲ್ಲಿ ಆಧುನಿಕ ಹಾಗೂ ವಿಶ್ವದರ್ಜೆಯ ಚಿಕಿತ್ಸೆ ಲಭ್ಯವಿದೆ. ಈಗಿನ ಆಹಾರ ಪದ್ದತಿ, ಜೀವನಶೈಲಿ ಯಿಂದಾಗಿ ಗ್ಯಾಸ್ಟ್ರೋಎಂಟ್ರಾಲಜಿ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಇದರ ಚಿಕಿತ್ಸೆಗೆ ಈ ಸಂಸ್ಥೆ ಸಹಕಾರಿಯಾಗಿದೆ. ಅಂಗಾಂಗ ಕಸಿ ಇತ್ತೀಚೆಗೆ ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತಿದೆ. ವಿಜ್ಞಾನ ಅಭಿವೃದ್ಧಿಯ ಜೊತೆಗೆ ಆಧುನಿಕ ತಂತ್ರಜ್ಞಾನವನ್ನೂ ಬಳಸಿಕೊಂಡು ರಾಜ್ಯದ ಆರೋಗ್ಯ ಅಭಿವೃದ್ಧಿಗೊಳಿಸುವುದು ಪ್ರಗತಿಶೀಲ ಸರ್ಕಾರದ ಕುರುಹು. ವಿಶ್ವದರ್ಜೆಯ ಚಿಕಿತ್ಸೆಯನ್ನು ಈ ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದು, ರೋಗಿಗಳು ಇದರ ಲಾಭವವನ್ನು ಪಡೆಯುವಂತೆ ಕರೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *