Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಪಿಸಿಸಿ ಅಧ್ಯಕ್ಷರ ವರ್ತನೆಗೆ ಜಾನಕ್ರೋಶ : ಪ್ರಜಾಧ್ವನಿ ಯಾತ್ರೆಯಲ್ಲಿ ಅಂಥದ್ದೇನು ಮಾಡಿದ್ರು..?

---Advertisement---

ಮಂಡ್ಯ: ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಮೂಲಕ ಜನರ ಬಳಿ ಹೋಗುತ್ತಿದ್ದಾರೆ. ಇಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆ ಸಾಗಿದೆ. ಕ್ಯಾಂತುಗೆರೆಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ‌ಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಮಹಿಳೆಯರೆಲ್ಲಾ ಸೇರಿ, ಡಿಕೆ ಶಿವಕುಮಾರ್ ಅವರಿಗೆ ಆರತಿ ಬೆಳಗಿ, ಸ್ವಾಗತ ಮಾಡಿದರು.

ಪ್ರಜಾಧ್ವನಿ ಯಾತ್ರೆಯಲ್ಲಿ ಜಾನಪದ ಕಲೆಯೂ ಮೊಳಗಿತ್ತು. ಜಾನಪದ ಕಲಾ ತಂಡಗಳ ಮೆರವಣಿಗೆ ನಡೆದಿದೆ. ಈ ವೇಳೆ ಡಿಕೆ ಶಿವಕುಮಾರ್ ಅವರು, ಕಲಾವಿದರ ಮೇಲೆ ಹಣವನ್ನು ಎರಚಿದ್ದಾರೆ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ ಕಲಾವಿದರಿಂದಾನೂ ಬೇಸರ ವ್ಯಕ್ತವಾಗಿದೆ.

ಡಿಕೆ ಶಿವಕುಮಾರ್ ಕಲಾವಿದರ ತಂಡಗಳ ಮೇಲೆ ಹಣವನ್ನು ಎರಚಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಜನ, ಕಮೆಂಟ್ ಗಳ ಮೂಲಕ ತಮ್ಮ ಬೇಸರ ಹೊರ ಹಾಕಿದ್ದಾರೆ. ಕಲಾವಿದರಿಗೆ ಮೊದಲು ಗೌರವ ನೀಡಿ ಎಂದು ಸಲಹೆಯನ್ನು ನೀಡಿದ್ದಾರೆ. ಕಲಾವಿದರ ಮೇಲೆ ಈ ರೀತಿ ಹಣವನ್ನೆಲ್ಲಾ ಎಸೆಯುವುದು ಶೋಭೆಯಲ್ಲ ಎಂದು ಇನ್ನು ಹಲವರು ಕಮೆಂಟ್ ಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...