Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣಾ ಅಕ್ರಮದಲ್ಲಿ ಭಾಗಿಯಾದರೆ ಕ್ರಿಮಿನಲ್ ಮೊಕದ್ದಮೆ : ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ  

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾರ್ಚ್.30) :
ಸಾರ್ವತ್ರಿಕ ವಿಧಾನ ಸಭಾ ಚುನಾವಣಾ ನೀತಿ ಸಂಹಿತೆ ಪಾಲನೆ ಕಡ್ಡಾಯವಾಗಿದೆ. ಯಾರು ಕೂಡ ರಾಜಕೀಯ ಆಮಿಷ ಹಾಗೂ ಚಟುವಟಿಕೆಗಳಿಗೆ ಬಲಿಯಾಗದಿರಿ. ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಸಂಘ, ಅಬಕಾರಿ ಇಲಾಖೆ ಹಾಗೂ ಮದ್ಯ ಮಾರಾಟಗಾರರು ಹಾಗೂ ಮುದ್ರಣಾಲಯಗಳ ಮಾಲೀಕರೊಂದಿಗೆ ಮಾದರಿ ಚುನಾವಣಾ ನೀತಿ ಸಂಹಿತೆ ಅನುಷ್ಠಾನ ಕುರಿತ ಸಭೆ ಜರುಗಿಸಿ ಅವರು ಮಾತನಾಡಿದರು.

ಈ ಬಾರಿ ಚುನಾವಣಾ ಆಯೋಗ ಮಹಿಳಾ ಸ್ವ ಸಹಾಯ ಸಂಘಗಳ ಕುರಿತು ಹೆಚ್ಚಿನ ಕಾಳಜಿ ವಹಿಸಿದೆ. ಸಂಘಗಳು ರಾಜಕೀಯ ಆಮಿಷಗಳಿಗೆ ಗುರಿಯಾಗಬಹುದು. ಚುನಾವಣೆಯಲ್ಲಿ ಅಕ್ರಮ ಹಣದ ವಹಿವಾಟು ನಡೆಸಲು ಮಹಿಳಾ ಸ್ವ ಸಹಾಯ ಗುಂಪುಗಳನ್ನು ರಾಜಕೀಯ ಸಂಘಟನೆಗಳು ದುರಪಯೋಗ ಪಡಿಸಿಕೊಳ್ಳಬಹುದು. ಆದ್ದರಿಂದ ಮಹಿಳಾ ಸ್ವ ಸಹಾಯ ಗುಂಪುಗಳ ನಾಯಕರು ಎಚ್ಚರಿಕೆ ವಹಿಸಬೇಕು. ಸಂಘಗಳ ಖಾತೆಗೆ ಅನಧಿಕೃತವಾಗಿ ಹಣ ಜಮೆ ಮಾಡುವುದು. ಅದನ್ನು ಸಂಘದ ಸದಸ್ಯರಿಗೆ ಹಂಚಿಕೆ ಮಾಡುವುದು ಕಂಡುಬಂದರೆ ಅಂತಹ ಸಂಘಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿ ಅಪರಾಧ ಸಾಬೀತಾದರೆ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದರು.

ಮಹಿಳಾ ಸ್ವ ಸಹಾಯ ಸಂಘಗಳು ತಮ್ಮ ಪ್ರತಿದಿನ ಹಣಕಾಸಿನ ವ್ಯವಹಾರದ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಮಾಹಿತಿ ನೀಡಬೇಕು. ಸಂಘಗಳ ಸದಸ್ಯರು ಕಡ್ಡಾಯವಾಗಿ ಮತ ಚಲಾಯಿಸವುದರೊಂದಿಗೆ ತಮ್ಮ ಕುಟುಂಬದವರನ್ನೂ ಸಹ ಮತ ಚಲಾಯಿಸಲು ಪ್ರೇರೇಪಿಸಬೇಕು ಜಿ.ಪಂ ಸಿಇಓ ಎಂ.ಎಸ್.ದಿವಾಕರ ಹೇಳಿದರು.

ಮದ್ಯ ಮಾರಾಟದ ವಹಿ ನಿರ್ವಹಣೆ ಕಡ್ಡಾಯ: ಚುನಾವಣೆಯಲ್ಲಿ ಜನರಿಗೆ ಆಮಿಷವೊಡ್ಡಲು ಮದ್ಯ ಪ್ರಮುಖ ಅಸ್ತ್ರವಾಗಿ ಬಳಕೆಯಾಗುತ್ತದೆ. ಇದನ್ನು ನಿಯಂತ್ರಿಸಲು ಚುನಾವಣಾ ಆಯೋಗ ನಿರ್ದೇಶನದಂತೆ ಸಂಚಾರಿ ಜಾಗೃತ ದಳ ರಚಿಸಲಾಗಿದೆ. ಈ ಜಾಗೃತ ದಳ ಮದ್ಯ ಮಾರಾಟ ಸ್ಥಳಗಳ ಪರಿಶೀಲನೆ ಬಂದಾಗ ಕಡ್ಡಾಯವಾಗಿ ಮದ್ಯ ಮಾರಾಟದ ವಹಿ ನೀಡಬೇಕು. ಇದರಲ್ಲಿ ಲಭ್ಯವಿರುವ ಮದ್ಯದ ಸಂಗ್ರಹ, ಮಾರಾಟ ವಿವರ, ಹಣ ಸಂದಾಯ ಬಗ್ಗೆ ಸ್ಪಷ್ಟವಾಗಿ ವಿವರ ನಮೂದು ಮಾಡಬೇಕು.

ನಿಯಮ ಮೀರಿ ಹೆಚ್ಚಿನ ಮದ್ಯ ಯಾರಿಗೂ ನೀಡಬಾರದು. ಯಾರದರೂ ದೊಡ್ಡ ಪ್ರಮಾಣದಲ್ಲಿ ಮದ್ಯ ಖರೀದಿಗೆ ಬಂದರೆ ಅಂತಹವರ ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ನೀಡಬೇಕು.
ಸಂಚಾರಿ ಜಾಗೃತ ದಳಗಳ ದಾಳಿ ಸಂದರ್ಭದಲ್ಲಿ ಮದ್ಯ ಮಾರಾಟದಲ್ಲಿ ಅಕ್ರಮ ಕಂಡುಬಂದರೆ, ನಿರ್ದಾಕ್ಷಿಣ್ಯವಾಗಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮದ್ಯ ಮಾರಾಟ ಸನ್ನದ್ಧನ್ನು ರದ್ದು ಪಡಿಸಲಾಗುವುದು. ಐಪಿಸಿ, ಸಿಆರ್‍ಪಿಸಿ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು.
ಮತದಾನ, ಮತ ಎಣಿಕೆ ಸೇರಿದಂತೆ ಪ್ರಮುಖ ದಿನಗಳಂದು ಮದ್ಯ ಮಾರಾಟಕ್ಕೆ ನಿಷೇಧಾಜ್ಞೆ ಹೊರಡಿಸಲಾಗಿರುತ್ತದೆ. ಈ ದಿನಗಳಂದು ಅತೀ ಜಾಗರೂಕತೆಯಿಂದ ಅಬಕಾರಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಮದ್ಯ ಮಾರಾಟದ ಅಕ್ರಮಗಳು ಕಂಡುಬಂದರೂ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಹೊಣೆ ಮಾಡಿ, ನಿರ್ಲಕ್ಷತೆ ಕಾರಣ ನೀಡಿ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ ಹೇಳಿದರು.

ಮುದ್ರಣ ಅವ್ಯವಹಾರ ಸಲ್ಲದು : 1951 ಪ್ರಜಾ ಪ್ರತಿನಿಧಿ ಕಾಯ್ದೆಯಲ್ಲಿ ಸ್ಪಷ್ಟವಾಗಿ ಮುದ್ರಣಾಲಯಗಳ ಕಾರ್ಯ ವೈಖರಿ ಬಗ್ಗೆ ತಿಳಿಸಲಾಗಿದೆ. ಜಿಲ್ಲೆಯ ಪ್ರತಿಯೊಂದು ಮುದ್ರಣಾಲಯಗಳು ಪ್ರಜಾ ಪ್ರತಿನಿಧಿ ಕಾಯ್ದೆಯ 127-ಎ ವಿಧಿಯಡಿ ಜಿಲ್ಲಾ ಚುನಾವಣಾ ಅಧಿಕಾರಿಗೆ ಚುನಾವಣಾ ಪ್ರಚಾರ ಸಾಮಗ್ರಿಗಳ ಮುದ್ರಣದ ಕುರಿತು ಮಾಹಿತಿ ನೀಡಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಷರತ್ತುಗಳನ್ನು ಉಲ್ಲಂಘನೆ ಮಾಡಬಾರದು.

ಯಾವುದೇ ಅವ್ಯವಹಾರಕ್ಕೆ ಅವಕಾಶವಿಲ್ಲ. ರಾಜಕೀಯ ಪಕ್ಷ ಅಥವಾ ಸಂಘಟನೆಗಳು ನೀಡುವ ಮುದ್ರಣದ ವಿವರ ಹಾಗೂ ಮುದ್ರಿಸುವ ಪತ್ರಿಯೊಂದು ಸಾಮಗ್ರಿಗಳ 4 ಪ್ರತಿಗಳನ್ನು ಚುನಾವಣಾ ಅಧಿಕಾರಿಗಳಿಗೆ ನೀಡಬೇಕು. ನಕಲಿ ಬಿಲ್, ಮುದ್ರಿಸಿದ ಪ್ರತಿಗಳ ವಿವರವನ್ನು ತಪ್ಪಾಗಿ ನಮೂದಿಸುವುದು ಕಂಡುಬಂದರೆ ಮುದ್ರಣಾಲಯದ ಪರವಾನಿಗೆ ರದ್ದು ಪಡಿಸಿ, ಮುದ್ರಣಾಲಯವನ್ನು ಮುಚ್ಚಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ ತಿಳಿಸಿದರು.

ಮುದ್ರಣ ಕಾರ್ಯಕ್ಕೆ ಅನುಮತಿ ಕಡ್ಡಾಯ : ಬಹುವರ್ಣದ ಪ್ರತಿಗಳನ್ನು ಹೊರ ಊರುಗಳಿಂದ ಮುದ್ರಿಸಿ ತರಲು ಸಂಬಂಧಪಟ್ಟ ಚುನಾವಣಾ ಅಧಿಕಾರಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಮುದ್ರಣಾಲಯದ ಮಾಲೀಕರು ಕಡಿಮೆ ದರ ನಮೂದಿಸುವುದು, ವೆಚ್ಚ ಕಡಿಮೆ ತೋರಿಸುವುದು ಅಪರಾಧವಾಗುತ್ತದೆ. ಈಗಾಗಲೇ ಚುನಾವಣಾ ಆಯೋಗಕ್ಕೆ ವಿವಿಧ ಮುದ್ರಣ ಸಾಮಗ್ರಿಗಳ ಮುದ್ರಣಕ್ಕೆ ತಗಲುವ ವೆಚ್ಚದ ಪಟ್ಟಿಯನ್ನು ಸಲ್ಲಿಸಲಾಗಿದೆ. ಯಾವುದೇ ರೀತಿಯ ಅವ್ಯವಹಾರಗಳಿಗೆ ಅವಕಾಶವಿಲ್ಲ ಎಂದು ಜಿ.ಪಂ. ಸಿಇಓ ಎಂ.ಎಸ್.ದಿವಾಕರ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಅಬಕಾರಿ ಉಪ ಆಯುಕ್ತ ಬಿ.ಮಾದೇಶ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಭಾರತಿ ಬಣಕಾರ್ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ಮತ್ತೊಮ್ಮೆ ಅಧಿಕಾರಕ್ಕೆ…!

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ದೊಡ್ಡ ಅಬ್ಬರವನ್ನೇ ಸೃಷ್ಟಿಸಿದೆ. ದ್ವಿಶತಕದ ಸೀಟುಗಳನ್ನು ದಾಟಿ ದಾಖಲೆ ಸೃಷ್ಟಿಸಿದ್ದಾರೆ. ಮಹಾಯುತಿ ಈಗಾಗಲೇ 220 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಮುಂದುವರಿದಿದೆ. ಏತನ್ಮಧ್ಯೆ, ಮಹಾವಿಕಾಸ್ ಅಘಾಡಿ 53 ಸ್ಥಾನಗಳಲ್ಲಿ ಮುನ್ನಡೆ

error: Content is protected !!