Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣಾ ನೀತಿ ಸಂಹಿತೆ ಜಾರಿ: ಚಿತ್ರದುರ್ಗ ಜಿಲ್ಲೆಯಲ್ಲಿ 18.67 ಲಕ್ಷ ನಗದು, 3.64 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾರ್ಚ್.31) : ವಿಧಾನಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ತೀವ್ರ ನಿಗಾ ವಹಿಸಲಾಗಿದ್ದು, ಮಾರ್ಚ್ 31 ರವರೆಗೆ ಜಿಲ್ಲೆಯಲ್ಲಿ ರೂ.18.67 ಲಕ್ಷ ನಗದು, 3.33 ಲಕ್ಷ ರೂ. ಮೌಲ್ಯದ ಒಟ್ಟು 830.97 ಲೀ. ಅಕ್ರಮ ಮದ್ಯ ಹಾಗೂ 30500 ರೂ. ಅಂದಾಜು ಮೌಲ್ಯದ 1.267 ಕೆ.ಜಿ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಗೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸಲು ಜಿಲ್ಲೆಯಾದ್ಯಂತ 35 ಚೆಕ್‍ಪೋಸ್ಟ್‍ಗಳು ಕಾರ್ಯನಿರ್ವಹಿಸುತ್ತಿವೆ. ದಿನದ 24 ಗಂಟೆಯೂ ಚೆಕ್‍ಪೋಸ್ಟ್‍ಗಳಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ನಿಟ್ಟಿನಲ್ಲಿ ಅಕ್ರಮವಾಗಿ ನಗದು ಸಾಗಾಣಿಕೆ, ಮದ್ಯ ಸಾಗಾಣಿಕೆ ಅಲ್ಲದೆ ಸೀರೆ, ಕುಕ್ಕರ್ ಸೇರಿದಂತೆ ವಿವಿಧ ಬಗೆಯ ಸಾಮಗ್ರಿಗಳ ಸಾಗಾಣಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಮಾ. 31 ರಂದು ಹಿರಿಯೂರು ತಾಲ್ಲೂಕಿನಲ್ಲಿ ದಾಖಲೆ ಇಲ್ಲದ 2.70 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ.

ರೂ.18,67,700 ನಗದು ವಶ: ಈವರೆಗೆ ಮೊಳಕಾಲ್ಮುರು ತಾಲ್ಲೂಕಿನಲ್ಲಿ ರೂ.1102700 ನಗದು, ಹಿರಿಯೂರು ತಾಲ್ಲೂಕಿನಲ್ಲಿ ರೂ.5,45,000 ನಗದು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ರೂ.2,20,000 ಸೇರಿದಂತೆ ಒಟ್ಟು ರೂ.18,67,700 ನಗದು ವಶ ಪಡಿಸಿಕೊಳ್ಳಲಾಗಿದೆ.

3.64 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ: ಚಳ್ಳಕೆರೆ ತಾಲ್ಲೂಕಿನಲ್ಲಿ 91366.92 ರೂ. ಮೌಲ್ಯದ 239.690 ಲೀ. ಅಕ್ರಮ ಮದ್ಯ ಹಾಗೂ 15000 ರೂ. ಮೌಲ್ಯದ 0.514 ಕೆ.ಜಿ. ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.  ಮೊಳಕಾಲ್ಮೂರು ತಾಲ್ಲೂಕಿನಲ್ಲಿ 82195.03 ರೂ. ಮೌಲ್ಯದ 196.510 ಲೀ. ಮದ್ಯ.

ಚಿತ್ರದುರ್ಗ ತಾಲ್ಲೂಕಿನಲ್ಲಿ 51566.16 ರೂ. ಮೌಲ್ಯದ 124.550 ಲೀ. ಮದ್ಯ ಹಾಗೂ 10500 ರೂ. ಮೌಲ್ಯದ 0.541 ಕೆ.ಜಿ. ಮಾದಕ. ಹಿರಿಯೂರು ತಾಲ್ಲೂಕಿನಲ್ಲಿ 35445.7 ರೂ. ಮೌಲ್ಯದ 86.370 ಲೀ. ಮದ್ಯ ಹಾಗೂ 5000 ರೂ. ಮೌಲ್ಯದ 0.212 ಕೆ.ಜಿ. ಮಾದಕ.  ಹೊಸದುರ್ಗ ತಾಲ್ಲೂಕಿನಲ್ಲಿ 25468 ರೂ. ಮೌಲ್ಯದ 62.190 ಲೀ. ಮದ್ಯ.  ಹೊಳಲ್ಕೆರೆ ತಾಲ್ಲೂಕಿನಲ್ಲಿ 47835.73 ರೂ. ಮೌಲ್ಯದ 120.691 ಲೀ. ಮದ್ಯ ವಶಪಡಿಸಿಕೊಂಡು, ಅಕ್ರಮ ಚಟುವಟಿಕೆ ನಡೆಸಿದವರ ವಿರುದ್ಧ ಕಾನೂನು ರೀತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಪಿ ಯೋಗೀಶ್ವರ್ ವರ್ಸಸ್ ನಿಖಿಲ್ ಕುಮಾರಸ್ವಾಮಿ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮುನ್ನಡೆ ..!

ಚನ್ನಪಟ್ಟಣ: ರಾಜ್ಯದಲ್ಲಿ ಇಂದು ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆಯಿಂದಾನೇ ನಡೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿತ್ತು. ಎಲ್ಲರ ಚಿತ್ತ ಇಂದು ಅತ್ತ ಕಡೆಯೇ ನೆಟ್ಟಿದೆ‌. ಮತ ಎಣಿಕೆ ನಡೆಯುತ್ತಿದ್ದು, ಸದ್ಯದ

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

error: Content is protected !!