Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಟಿಕೆಟ್ ಸಿಗದೆ ಇದ್ದರೆ ಬಂಡಾಯವೇಳುತ್ತಾರಾ ಅಖಂಡ ಶ್ರೀನಿವಾಸ ಮೂರ್ತಿ..!

---Advertisement---

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಖಾಡ ರೆಡಿಯಾಗಿದೆ. ಮೂರು ಪಕ್ಷಗಳಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ಕೆಲ ಆಕಾಂಕ್ಷಿಗಳು ಈಗಾಗಲೇ ಬಂಡಾಯವೆದ್ದಿದ್ದಾರೆ. ಬಂಡಾಯ ಶಮನ ಮಾಡುವ ಕೆಲಸವನ್ನು ಪಕ್ಷಗಳು ಮಾಡುತ್ತಿವೆಯಾದರೂ, ಪ್ರಭಾವಿ ಅಭ್ಯರ್ಥಿಗಳಿಂದ ಹೊಡೆತ ಬೀಳುವ ಸಾಧ್ಯತೆ ಇದೆ. ಇದೀಗ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೂಡ ಬಂಡಾಯವೇಳುವ ಎಲ್ಲಾ ಸಾಧ್ಯತೆ ಇದೆ.

ಈ ಬಾರಿಯ ಚುನಾವಣೆಗೆ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್ ಸಿಗೋದು ಅನುಮಾನ ಎನ್ನಲಾಗುತ್ತಿದೆ. ಟಿಕೆಟ್ ಸಿಗದೆ ಇದ್ದರೆ ಬಂಡಾಯವೇಳುವುದು ಖಚಿತ ಎಂದು ಆಪ್ತ ಮೂಲಗಳಿಂದ ವಿಚಾರ ಹೊರ ಬಿದ್ದಿದೆ. ಯಾಕಂದ್ರೆ ಪುಲಿಕೇಶಿ ನಗರದಲ್ಲಿ ಪ್ರಬಲ ಅಭ್ಯರ್ಥಿಯಾಗಿ ಬೆಳೆದಿದ್ದಾರೆ ಅಖಂಡ ಶ್ರೀನಿವಾಸ್ ಮೂರ್ತಿ. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ, ಬಹುಮತದಿಂದ ಗೆಲುವು ಕಂಡಿದ್ದರು.

ಅಖಂಡ ಶ್ರೀನಿವಾಸ್ ಮೂರ್ತಿಗೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹ್ಮದ್ ಕೂಡ ಬೆಂಬಲ ಸೂಚಿಸಿದ್ದಾರೆ. ಟೊಕೆಟ್ ನೀಡಲು ಒತ್ತಾಯ ಕೇಳಿ ಬಂದಿದೆ. ಆದರೂ 124ರ ಪಟ್ಟಿಯಲ್ಲಿ ಹೆಸರು ಬಂದಿಲ್ಲ. ಟಿಕೆಟ್ ಸಿಗದೆ ಹೋದರೆ ಮುಂದೆ ಬಿಜೆಪಿ ಪಕ್ಷ‌ ಸೇರುವುದು ಅಥವಾ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆಯೂ ಆಪ್ತರ ಬಳಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...