ಭಗವಾನ್ ಮಹಾವೀರರ ತತ್ವಗಳು ಎಲ್ಲಾ ಸಮಾಜಕ್ಕೆ ಅನ್ವಯಿಸುತ್ತದೆ : ಜೈನ್ ಸಂಘದ ಅಧ್ಯಕ್ಷ ವಸ್ತಿಮಲ್

suddionenews
By suddionenews Add a Comment 1 Min Read
Disclosure: This website may contain affiliate links, which means I may earn a commission if you click on the link and make a purchase. I only recommend products or services that I personally use and believe will add value to my readers. Your support is appreciated!

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏಪ್ರಿಲ್. 04):  ಭಗವಾನ್ ಮಹಾವೀರರು ಬೋಧಿಸಿದ “ಬದುಕಿ ಹಾಗೂ ಬದುಕಲು ಬಿಡಿ” ಎನ್ನುವ ಅಹಿಂಸಾ ತತ್ವ ನಮ್ಮ ಜೀವನಕ್ಕೆ ದಾರಿದೀಪವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ನೀತಿ ಸಂಹಿತೆ ಜಾರಿ ಇರುವುದರಿಂದ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರು ಭಗವಾನ್ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಮಾತಾಡಿದ ಅವರು, ಭಗವಾನ್ ಮಹಾವೀರ ಅವರ ತತ್ವ, ಆದರ್ಶ ಅಳವಡಿಸಿಕೊಂಡು, ಅವುಗಳ ಮಾರ್ಗದರ್ಶನದಲ್ಲಿ ನಾವು ನಡೆಯೋಣ. ಮಹಾತ್ಮರ ಆದರ್ಶ ನಮ್ಮ ಬದುಕಿಗೆ ದಾರಿದೀಪವಾಗಲಿ ಎಂದು ಹೇಳಿದರು.

ಜೈನ್ ಸಂಘದ ಅಧ್ಯಕ್ಷ ವಸ್ತಿಮಲ್ ಮಾತನಾಡಿ ಭಗವಾನ್ ಮಹಾವೀರರು ಬೋಧಿಸಿದ ತತ್ವಗಳು ಎಲ್ಲ ಸಮಾಜಕ್ಕೆ ಅನ್ವಯಿಸುತ್ತದೆ.  ಸರ್ವವನ್ನೂ ತ್ಯಾಗ ಮಾಡಿದ ಮಹಾವೀರರು, ಜೀವನದಲ್ಲಿ ಅರಿಷಡ್ವರ್ಗಗಳನ್ನು ನಿಗ್ರಹಿಸಿದಲ್ಲಿ ಜೀವನದಲ್ಲಿ ನೆಮ್ಮದಿಯ ಬದುಕು ಕಾಣಬಹುದು ಎಂಬುದಾಗಿ ಬೋಧಿಸಿದರು ಎಂದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಸತ್ಯನಾರಾಯಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಜೈನ್ ಸಂಘದ ಕಾರ್ಯದರ್ಶಿ ಪ್ರೇಮಚಂದ್, ಟ್ರಸ್ಟಿ ಪಿ.ಸೌಭಾಗ್‍ಮಲೆ, ಸದಸ್ಯ ಪಿ.ಪುಕ್‍ರಾಜ್ ಸೇರಿದಂತೆ ಮತ್ತಿತರರು ಇದ್ದರು. ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ನಿರೂಪಿಸಿದರು.

ಫೋಟೋವಿವರ: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಭಗವಾನ್ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಭಗವಾನ್ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

Share This Article
Leave a Comment

Leave a Reply

Your email address will not be published. Required fields are marked *

error: Content is protected !!