Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಗೆ ಅಧಿಕಾರಕ್ಕಿಂತ ದೇಶದ ಅಭಿವೃದ್ದಿ, ದೇಶ ಭಕ್ತಿ ಮುಖ್ಯ : ಎ.ಮುರಳಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ,  (ಏ.06) : ಭಾರತೀಯ ಜನತಾಪಾರ್ಟಿಗೆ ಅಧಿಕಾರಕ್ಕಿಂತ ದೇಶದ ಅಭಿವೃದ್ದಿ, ದೇಶ ಭಕ್ತಿ ಮುಖ್ಯ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಹೇಳಿದರು.

ಬಿಜೆಪಿ.ಕಚೇರಿಯಲ್ಲಿ ಗುರುವಾರ 43 ನೇ ಸಂಸ್ಥಾಪನಾ ದಿನದ ಅಂಗವಾಗಿ ಪಕ್ಷದ ಭಾವುಟ ಹಾರಿಸಿ ಮಾತನಾಡಿದರು.
ಹಿರಿಯರ ತ್ಯಾಗ ಬಲಿದಾನದಿಂದ ಕಟ್ಟಿದ ಪಕ್ಷಕ್ಕೆ ಪಂಡಿತ್ ದೀನ್‍ದಯಾಳ್, ಶ್ಯಾಂ ಪ್ರಸಾದ್ ಮುಖರ್ಜಿ ಇವರುಗಳು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು.

ಭಾರತೀಯ ಜನತಾಪಾರ್ಟಿ ದೇಶದಲ್ಲಿ ಇತಿಹಾಸ ಸೃಷ್ಠಿಸಿದೆ. ಕಳೆದ ಅರವತ್ತು ಎಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಮುಸ್ಲಿಂರ ಓಲೈಕೆಯಲ್ಲಿ ತೊಡಗಿದ್ದನ್ನು ಬಿಟ್ಟರೆ ಬೇರೆ ಯಾವ ಅಭಿವೃದ್ದಿ ಕೆಲಸಗಳು ಆಗಿಲ್ಲ. ನರೇಂದ್ರಮೋದಿರವರು ದೇಶದ ಪ್ರಧಾನಿಯಾದ ಮೇಲೆ ಇಡಿ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಪಡಿಸಿ ದಿಟ್ಟ ಕ್ರಮ ಕೈಗೊಂಡಿದ್ದು, ರಾಮ ಮಂದಿರ ನಿರ್ಮಾಣ ಇವೆಲ್ಲಾ ದೊಡ್ಡ ಸಾಧನೆ ಎಂದು ಬಣ್ಣಿಸಿದರು.

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಪಕ್ಷದ ಭಾವುಟ ಹಾರಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ವಿನಂತಿಸಿದರು.

ಜಿಲ್ಲಾ ಬಿಜೆಪಿ. ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್ ಮಾತನಾಡಿ ಇಲ್ಲಿಯವರೆಗೂ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ದಿಯನ್ನು ಕುಂಠಿತಗೊಳಿಸಿದೆ. ನರೇಂದ್ರಮೋದಿ ದೇಶದ ಪ್ರಧಾನಿಯಾದ ಮೇಲೆ ಎಂಟು ವರ್ಷಗಳಲ್ಲಿ ಮಹತ್ತರ ಬದಲಾವಣೆಯಾಗಿದೆ.

ಪಂಡಿತ್ ದೀನ್‍ದಯಾಳ್, ಶ್ಯಾಂಪ್ರಸಾದ್ ಮುಖರ್ಜಿರವರ ತ್ಯಾಗ ಬಲಿದಾನದಿಂದ ಪಕ್ಷ ಇಂದು ಗಟ್ಟಿಯಾಗಿ ನಿಂತಿದೆ. ಭಾರತೀಯ ಜನಸಂಘ 1977 ರಲ್ಲಿ ಭಾರತೀಯ ಜನತಾಪಕ್ಷವಾಯಿತು. ಅನೇಕರ ವಿರೋಧ, ಭಯದ ನಡುವೆ ನಾಯಕರುಗಳು ಎದೆಗುಂದದೆ, ಜಗ್ಗದೆ ಪಕ್ಷವನ್ನು ಮುನ್ನಡೆಸಿಕೊಂಡು ಬಂದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆರೋಗ್ಯ, ಶಿಕ್ಷಣದಲ್ಲಿ ಭಾರತ ಈಗ ಅಭಿವೃದ್ದಿಯತ್ತ ಸಾಗುತ್ತಿದೆ. ಬಿಜೆಪಿ.ಗೆ ಅಧಿಕಾರವೊಂದೆ ಮುಖ್ಯವಲ್ಲ. ದೇಶದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಸ್ಥಾನಗಳಲ್ಲಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರುಗಳ ಮೇಲಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಜಿಲ್ಲಾ ಉಪಾಧ್ಯಕ್ಷರುಗಳಾದ ಸಂಪತ್, ಶ್ಯಾಮಲ ಶಿವಪ್ರಕಾಶ್, ಜಿಲ್ಲಾ ಕಾರ್ಯದರ್ಶಿಗಳಾದ ಎ.ರೇಖ, ರಜಿನಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್, ನಗರ ಪ್ರಧಾನ ಕಾರ್ಯದರ್ಶಿ ಕಿರಣ್, ನಗರಸಭೆ ಸದಸ್ಯ ಹರೀಶ್, ಬಸಮ್ಮ, ಕವನ, ಶಂಭು, ಹೇಮಂತ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...