ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಕೇಂದ್ರದ ಕೆಲಸಗಳಿಗೂ ಹೆಚ್ಚಿನ ಒತ್ತು ನೀಡುತ್ತಾರೆ. ಕೇಂದ್ರದಲ್ಲಿ ಹುದ್ದೆಗಳು ಅನೌನ್ಸ್ ಆದಾಗಲೂ ಅರ್ಜಿ ಸಲ್ಲಿಸಬೇಕು ಎಂದುಕೊಳ್ಳುತ್ತಾರೆ. ಆದರೆ ಪರೀಕ್ಷೆಗಳು ಕನ್ನಡದಲ್ಲಿ ಇರದೇ ಇರುವ ಕಾರಣಕ್ಕೆ ಅದೆಷ್ಟೋ ಪ್ರತಿಭಾವಂತ ಮಕ್ಕಳಿಗೆ ಕೇಂದ್ರದಲ್ಲಿ ಕೆಲಸ ಸಿಗುವುದು ಕಷ್ಟ ಸಾಧ್ಯವಾಗುತ್ತದೆ. ಇಂದು ಸಿದ್ರಾಮಯ್ಯ ಅದನ್ನು ಬದಲಾಯಿಸುವುದಕ್ಕೆ ಒತ್ತಾಯಿಸಿದ್ದಾರೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿಗೆ ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯುವುದಕ್ಕೆ ಅವಕಾಶವಿದೆ. ಕನ್ನಡ ಬಲ್ಲವರು ಈ ಪರೀಕ್ಷೆಗಳನ್ನು ತೆಗೆದುಕೊಳ್ಳುವುದಕ್ಕೆ ಆಗಲ್ಲ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. ಭಾಷೆಯ ಸಮಸ್ಯೆಯಿಂದಾಗಿ ಅರ್ಹತೆ ಇರುವವರು, ಜ್ಞಾನ ಇರುವವರು ವಂಣಚಿತರಾಗುತ್ತಿದ್ದಾರೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರವೇಶಿಸಿ, ಸರಿ ಪಡಿಸಬೇಕಾಗಿದೆ ಎಂದಿದ್ದಾರೆ.
ಪರೀಕ್ಷೆಯನ್ನು ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಗೊಳಿಸಿ, ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಅನ್ಯಾಯವಾಗಿದೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ಎದುರಾಗಿದೆ. ಯುವ ಜನರ ಭವಿಷ್ಯ ಮಂಕಾಗುತ್ತಿದೆ. ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಕೇಳಿಕೊಂಡಿದ್ದಾರೆ.