ರಾಹುಲ್ ಗಾಂಧಿ ರಾಜಕೀಯ ಜೀವನದಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡಿದ್ರು. ಈಗ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಹಲವು ತಂತ್ರಗಳನ್ನು ಮಾಡಿದ್ದಾರೆ. ಪ್ರತಿಪಕ್ಷಗಳ ನಾಯಕರ ಭೇಟಿಯನ್ನು ಮಾಡಿದ್ದಾರೆ.
ಕಾಂಗ್ರೆಸ್ ಜನತಾದಳ, ರಾಷ್ಟ್ರೀಯ ಜನತಾ ದಳ ಪಕ್ಷದ ಪ್ರಮುಖ ನಾಯಕರನ್ನು ಭೇಟಿಯಾಗಿದ್ದಾರೆ. ಬಿಜೆಪಿ ವಿರುದ್ಧ ಗೆಲುವು ಪಡೆಯಲು ಯೋಜನೆ ರೂಪಿಸಿದ್ದಾರೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕು.ಅರ್, ತೇಜಸ್ವಿ ಯಾದವ್, ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಸೇರಿದಂತೆ ಹಕವರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಒಗ್ಗಟ್ಟಿಗಾಗಿ ವಿರೋಧ ಪಕ್ಷಗಳು ಐತಿಹಾಸಿಕ ಹೆಜ್ಜೆ ಇಡಲಾಗಿದೆ. ನಮ್ಮ ಜೊತೆಗೆ ದೇಶದ ಬೇರೆ ಬೇರೆ ನಾಯಕರು ಕೈ ಜೋಡಿಸಲಿದ್ದಾರೆ ಎಂದಿದ್ದಾರೆ. ಒಟ್ಟಾರೆ ಮುಂದಿನ ಲೋಕಸಭಾ ಚುನಾವಣೆಯಲ್ಲು ಬಿಜೆಪಿಯನ್ನು ಮಣಿಸಲು, ಪ್ರತಿಪಕ್ಷಗಳು ಈಗಿನಿಂದಾನೇ ತಯಾರಿ ನಡೆಸುತ್ತಿವೆ.