Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ನಿಯಮಿತ ಗ್ರಾಹಕರಿಗೆ ಗುಣಮಟ್ಟದ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ : ಸಚ್ಚಿದಾನಂದ ಸರಸ್ವತಿ ಸ್ವಾಮಿಗಳು

Facebook
Twitter
Telegram
WhatsApp

ಚಿತ್ರದುರ್ಗ, (ಅ.11) : ದೊಡ್ಡ ಬ್ಯಾಂಕ್‍ಗಳ ರೀತಿಯಲ್ಲಿ ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ನಿಯಮಿತ ವಹಿವಾಟು ನಡೆಸಿಕೊಂಡು ಸುಸ್ಥಿತಿಯಲ್ಲಿದೆ ಎನ್ನುವುದಾದರೆ ಅದಕ್ಕೆ ಅನೇಕರ ಶ್ರಮವಿದೆ ಎಂದು ಬೆಂಗಳೂರಿನ ವಾಸವಿ ಪೀಠಂ ಪೀಠಾಧ್ಯಕ್ಷರಾದ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳು ಸಂತಸ ವ್ಯಕ್ತಪಡಿಸಿದರು.

ಇಲ್ಲಿನ ಅಂಬೇಡ್ಕರ್ ಪ್ರತಿಮೆ ಬಳಿಯಿರುವ ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ನಿಯಮಿತ ನವೀಕೃತ ಶಾಖೆಯನ್ನು ಸೋಮವಾರ ಉದ್ಘಾಟಿಸಿ ನಂತರ ರೋಟರಿ ಬಾಲಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಬ್ಯಾಂಕ್, ಆಸ್ಪತ್ರೆ, ದೇವಸ್ಥಾನ, ಫೈನಾನ್ಸ್ ವಹಿವಾಟು ಇವುಗಳು ಎಲ್ಲಿ ಪಾರದರ್ಶಕವಾಗಿರುತ್ತದೋ ಅಂತಹ ಸಮಾಜ ಸದೃಢವಾಗಿ ಬೆಳೆಯುತ್ತದೆ ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ನಿಯಮಿತ ಚಿತ್ರದುರ್ಗದಲ್ಲಿ ಉತ್ತಮ ವಹಿವಾಟು ನಡೆಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇದು ಜನಾಂಗದ ದೊಡ್ಡ ಸಾಧನೆ. ಎಲ್ಲಿಯೂ ನಷ್ಟ ಅನುಭವಿಸಿಲ್ಲ. ದಸರಾ ಹಬ್ಬದ ನವರಾತ್ರಿಯಲ್ಲಿ ದುರ್ಗಿ, ಮಹಾಲಕ್ಷ್ಮಿ, ಸರಸ್ವತಿಗೆ ಮೂರು ಮೂರು ದಿನಗಳ ಕಾಲ ಪೂಜೆ ಸಲ್ಲಿಸಲಾಗುವುದು. ಅದೇ ರೀತಿ ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ನಿಯಮಿತಕ್ಕೆ ಆರ್ಥಿಕ ಶಕ್ತಿಯಿದೆ. ಮುಂದಿನ ದಿನಗಳಲ್ಲಿ ಇನ್ನು ಬಲವಾಗಲಿ ಎಂದು ಹಾರೈಸಿದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಭದ್ರಿನಾಥ್ ಮಾತನಾಡಿ ಯಾವುದೇ ಒಂದು ಸಮಾಜ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಂದುವರೆದಾಗ ಮಾತ್ರ ಬಲಿಷ್ಟ ಸಮಾಜವಾಗಿ ಬೆಳೆಯಬಹುದು. ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ನಿಯಮಿತ ಮೂರು ಶಾಖೆಗಳನ್ನು ಹೊಂದಿದ್ದು, ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ವ್ಯಾಪಿಸುವಂತಾಗಲಿ. ಇಂದು ನವೀಕೃತ ಶಾಖೆಯ ಉದ್ಘಾಟನೆಯಾಗುತ್ತಿದೆ ಎಂದರೆ ನೂರಾರು ಮಂದಿ ಪರಿಶ್ರಮಪಟ್ಟಿದ್ದಾರೆ. ಹೀಗೆ ಮುಂದುವರೆಸಿಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡಲಿ. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ಹೇಳಿದರು.

ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ನಿಯಮಿತದ ಅಧ್ಯಕ್ಷ ಪಿ.ಎಸ್.ನಾಗರಾಜಶೆಟ್ರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೇವಲ ಇ.ಸ್ಟಾಂಪಿಂಗ್ ತೆರೆಯುವುದಕ್ಕಾಗಿ ಇಲ್ಲಿ ಆರಂಭಿಸಿದ ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ನಿಯಮಿತಿ ಈಗ ನವೀಕೃತ ಶಾಖೆಯನ್ನು ತೆರೆದಿರುವುದು ಅತ್ಯಂತ ಖುಷಿ ಕೊಟ್ಟಿದೆ. ಇದಕ್ಕೆ ಎಲ್ಲರ ಸಹಕಾರವಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಹೆಚ್ಚು ಶಾಖೆಗಳನ್ನು ತೆರೆಯುವಂತಾಗಲಿ ಎಂದರು.

ದಿ.ಮರ್ಚೆಂಟ್ಸ್ ಸೌಹಾರ್ಧ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ, ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್.ಎನ್.ಕಾಶಿವಿಶ್ವನಾಥಶೆಟ್ಟಿ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ಎಲ್.ಸುರೇಶ್‍ರಾಜು ವೇದಿಕೆಯಲ್ಲಿದ್ದರು.

ಎಸ್.ಕೃಷ್ಣಕುಮಾರ್, ಎಲ್.ಆರ್.ಅನಿತಾರಾಜ್, ಎಲ್.ಬ್ರಹ್ಮಾನಂದಗುಪ್ತ, ಎಸ್.ಶ್ವೇತ, ಸಿ.ಹರೀಶ್, ಎಸ್.ಶೈಲಜಾ, ಕೆ.ವಿ.ಮಂಜುಪ್ರಸಾದ್, ಕೆ.ಎಸ್.ಸಂಜಯ್‍ಕುಮಾರ್ ಇನ್ನು ಅನೇಕರು ಸಮಾರಂಭದಲ್ಲಿದ್ದರು.

ಶ್ರೀವಳ್ಳಿ ರಾಜ್‍ಕುಮಾರ್ ಪ್ರಾರ್ಥಿಸಿದರು. ಎಲ್.ಬ್ರಹ್ಮಾನಂದಗುಪ್ತ ಸ್ವಾಗತಿಸಿದರು. ಎಸ್.ಕೃಷ್ಣಕುಮಾರ್ ವಂದಿಸಿದರು. ಶ್ರೀಮತಿ ಎಸ್.ಶ್ವೇತಾ ಕಾರ್ತಿಕ್, ಶ್ರೀಮತಿ ಎಸ್.ಶೈಲಜ ಇವರುಗಳು ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!