ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಮೊದಲು, ಎರಡನೇ ಮತ್ತು ಮೂರನೇ ಹಂತದ ಪಟ್ಟಿಯನ್ನು ರಿಲೀಸ್ ಮಾಡಿದೆ. ಆದರೆ ಆ ಹದಿನೈದು ಕ್ಷೇತ್ರದ ಟಿಕೆಟ್ ಅನ್ನು ಹಾಗೆಯೇ ಉಳಿಸಿಕೊಂಡು ಬಿಟ್ಟಿದೆ. ಅದಕ್ಕೆ ಕಾರಣವೇ ಬೇರೆ.
ಮೂರನೇ ಪಟ್ಟಿಯಲ್ಲಿ 43 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಆದರೆ ಘೋಷಣೆ ಮಾಡದ ಹದಿನೈದು ಕ್ಷೇತ್ರಗಳ ಬಗ್ಗೆ ಕಾಂಗ್ರೆಸ್ ಕಾದು ನೋಡುವ ತಂತ್ರ ಅನುಸರಿಸುತ್ತದೆ. ಯಾಕಂದ್ರೆ ಈಗಾಗಲೇ ಬಿಜೆಪಿಯಲ್ಲಿ ಹಲವರು ಬಂಡಾಯವೆದ್ದಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿ ಅವರು ಪ್ರತಿನಿಧಿಸುವ ಶಿಗ್ಗಾಂವಿ ಹಾಗೂ ಜಗದೀಶ್ ಶೆಟ್ಟರ್ ಪ್ರತಿನಿಧಿಸಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಕ್ ಕ್ಷೇತ್ರಕ್ಕೂ ಇನ್ನು ಟಿಕೆಟ್ ಅನೌನ್ಸ್ ಮಾಡಿಲ್ಲ.
ಟಿಕೆಟ್ ಘೋಷಣೆಯಾಗದ ಕ್ಷೇತ್ರಗಳು ಈ ರೀತಿ ಇದೆ. ಪುಲಿಕೇಶಿ ನಗರ, ಸಿವಿ ರಾಮನ್ ನಗರ, ಮುಳಬಾಗಿಲು, ರಾಯಚೂರು ನಗರ, ಶಿಗ್ಗಾವಿ, ಶ್ರವಣಬೆಳಗೊಳ, ಅರಕಲಗೂಡು, ಲಿಂಗಸಗೂರು, ಹುಬ್ಬಳ್ಳಿ – ಧಾರಾವಾಡ ಸೆಂಟ್ರಲ್, ಹುಬ್ಬಳ್ಳಿ – ಧಾರವಾಡ ಪಶ್ಚಿಮ, ಮಂಗಳೂರು ಉತ್ತರ, ಶಿಡ್ಲಘಟ್ಟ, ಚಿಕ್ಕಮಗಳೂರು, ಕೆ ಆರ್ ಪುರಂ, ಹರಿಹರದಲ್ಲಿ ಟಿಕೆಟ್ ಘೋಷಣೆಯಾಗಿಲ್ಲ.